ಸಾರಾಂಶ
ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಕುರಿತು ಸರ್ಕಾರಕ್ಕೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಕರೆ ಮಾಡಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ:
ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಕುರಿತು ಸರ್ಕಾರಕ್ಕೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಕರೆ ಮಾಡಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಗೋಕುಲ್ ರಸ್ತೆಯಲ್ಲಿರುವ ಆರ್‌ಎಸ್‌ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು 35ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಿದರು.ಮುಂಜಾಗ್ರತಾ ಕ್ರಮವಾಗಿ ಕೇಶವಕುಂಜದ ಸುಮಾರು 200 ಮೀಟರ್ ದೂರದಲ್ಲಿಯೇ ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರಿಗೆ ನಿರ್ಬಂಧ ಹೇರಿದ್ದರು. ಕೆಎಸ್‌ಆರ್‌ಟಿಸಿ ಕ್ವಾರ್ಟರ್ಸ್ ಮುಂಭಾಗದಿಂದ ಪ್ರತಿಭಟನೆ ನಡೆಸುತ್ತ ಬಂದ ಕಾರ್ಯಕರ್ತರು, ಬ್ಯಾರಿಕೇಡ್ ದಾಟಿ ಮುನ್ನಗ್ಗಲು ಯತ್ನಿಸಿದರು. ಈ ವೇಳೆ ಸುಮಾರು 35 ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು, ಎರಡು ವಾಹನದಲ್ಲಿ ಹೊಸ ಸಿಎಆರ್ ಮೈದಾನಕ್ಕೆ ಕರೆದೊಯ್ದರು.
ಯುತ್ ಕಾಂಗ್ರೆಸ್ ಅಧ್ಯಕ್ಷ ಅರ್ಜುನ್ ಪಾಟೀಲ್, ನಾಗರಾಜ ಕೊಟಗಿ ಸೇರಿದಂತೆ ಹಲವರು ಇದ್ದರು.