ವಿಜಯಪುರ: ಜಮೀನು ಬದುವಿನ ವಿಚಾರವಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಕಠಿಣ ಶಿಕ್ಷೆ ಹಾಗೂ 29,000 ರೂ ದಂಡ ವಿಧಿಸಿ ತೀರ್ಪು ನೀಡಿದೆ.

ಈಶ್ವರಯ್ಯ ಹಿರೇಮಠ ಎಂಬಾತನಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. 2019 ನ.25ರಂದು ತಾಲೂಕಿನ ಹೊನ್ನಳ್ಳಿಯಲ್ಲಿ ಪಂಚಾಕ್ಷರಿ ಹಿರೇಮಠ ಎಂಬುವವರನ್ನು ಕೊಲೆ ಮಾಡಲು ಯತ್ನಿಸಲಾಗಿತ್ತು. ಈ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ.ಎ ಅವರು ಸಾಕ್ಷಿ ಪುರಾವೆಗಳನ್ನು ಅವಲೋಕಿಸಿ ಆರೋಪಿ ಈಶ್ವರಯ್ಯ ತಂ.ಪಾರುತಯ್ಯ ಹಿರೇಮಠಗೆ ಏಳು ವರ್ಷ ಕಠಿಣ ಶಿಕ್ಷೆ ಹಾಗೂ ₹29,000 ದಂಡ, ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಧಾನ ಸರ್ಕಾರಿ ಅಭಿಯೋಜಕ ಎಸ್.ಎಚ್.ಹಕೀಮ ವಾದ ಮಂಡಿಸಿದ್ದರು.