ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ ಎಫ್ಐಆರ್‌

| Published : May 22 2025, 01:00 AM IST

ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ ಎಫ್ಐಆರ್‌
Share this Article
  • FB
  • TW
  • Linkdin
  • Email

ಸಾರಾಂಶ

ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕನಕಗಿರಿಯ ಕಾಂಗ್ರೆಸ್‌ ಕಾರ್ಯಕರ್ತ ಪ್ರಕಾಶ ಭೋವಿ ವಿರುದ್ಧ ಇದೀಗ ಪ್ರಕರಣ ದಾಖಲಾಗಿದ್ದು ಆರೋಪಿಯ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕನಕಗಿರಿ

ಪಟ್ಟಣದ ಬಸ್ ನಿಲ್ದಾಣ ವ್ಯಾಪ್ತಿಯ ನಿರ್ಜನ ಪ್ರದೇಶಕ್ಕೆ ಹಾಡುಹಗಲೇ ಮಾನಸಿಕ ಅಸ್ವಸ್ಥೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬುಧವಾರ ಎಫ್ಐಆರ್ ದಾಖಲಾಗಿದೆ.

ಪಟ್ಟಣದ ನಿವಾಸಿ, ಕಾಂಗ್ರೆಸ್‌ ಕಾರ್ಯಕರ್ತನೂ ಆಗಿರುವ ಪ್ರಕಾಶ ಭೋವಿ ಆರೋಪಿಯಾಗಿದ್ದು, ಈತನ ವಿರುದ್ಧ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರೂಪಾಕ್ಷಿ ದೂರು ನೀಡಿದ್ದರು.

ಮಾನಸಿಕ ಅಸ್ವಸ್ಥೆಯನ್ನು ಭಾನುವಾರ ಪುಸಲಾಯಿಸಿದ್ದ ಆರೋಪಿ, ನಿರ್ಮಾಣ ಹಂತದಲ್ಲಿನ ಶೌಚಗೃಹದ ಹಿಂಭಾಗದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದನ್ನು ಕಂಡ ಕೆಲವರು ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟಿದ್ದರು. ಈ ಕುರಿತು ಮಾಧ್ಯಮಗಳಲ್ಲಿಯೂ ವರದಿ ಪ್ರಕಟವಾದ ಬೆನ್ನಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಸಿಡಿಪಿಒ ಅವರು ಆರೋಪಿಯ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಪ್ರಕರಣ ದಾಖಲಿಸಿದ್ದಾರೆ.

ಆರೋಪಿತನ ವಿರುದ್ಧ ಬಿಎನ್‌ಎಸ್-2003ರ ಕಾಯ್ದೆಯಡಿ ೭೫(೧) (II), ೭೫ (೧) (III), ೭೮(೧) (I) ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತನ ಈ ಕೃತ್ಯಕ್ಕೆ ಪಟ್ಟಣದ ಜನತೆ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿಸ್ಥನಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದ್ದಾರೆ.