ಪಂಜಾಬಲ್ಲಿ ಆಕಾಂಕ್ಷ ಆತ್ಮಹತ್ಯೆ ಕೇಸ್‌: ಆರೋಪಿ ಕೇರಳ ಪ್ರೊಫೆಸರ್‌ ಬಂಧನ

| Published : May 21 2025, 12:11 AM IST

ಪಂಜಾಬಲ್ಲಿ ಆಕಾಂಕ್ಷ ಆತ್ಮಹತ್ಯೆ ಕೇಸ್‌: ಆರೋಪಿ ಕೇರಳ ಪ್ರೊಫೆಸರ್‌ ಬಂಧನ
Share this Article
  • FB
  • TW
  • Linkdin
  • Email

ಸಾರಾಂಶ

ಪಂಜಾಬ್‌ನ ಕಾಲೇಜ್‌ವೊಂದರಲ್ಲಿ ಸಾವಿಗೆ ಶರಣಾದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಆಕಾಂಕ್ಷ ಎಸ್. ನಾಯರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರೊಫೆಸರ್ ಅನ್ನು ಪಂಜಾಬ್ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಪಂಜಾಬ್‌ನ ಕಾಲೇಜ್‌ವೊಂದರಲ್ಲಿ ಸಾವಿಗೆ ಶರಣಾದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಆಕಾಂಕ್ಷ ಎಸ್. ನಾಯರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರೊಫೆಸರ್ ಅನ್ನು ಪಂಜಾಬ್ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.

ಕೇರಳ ಮೂಲದ ಬಿಜಿಲ್ ಸಿ ಮ್ಯಾಥ್ಯೂ (45) ಬಂಧಿತ ಪ್ರೊಫೆಸರ್‌. ಈತ ಪಂಜಾಬ್‌ನ ಪಗ್ವಾಡದಲ್ಲಿರುವ ಎಲ್‌ಪಿಯು (ಲವ್ಲಿ ಪ್ರೊಫೆಶನಲ್ ಯೂನಿವರ್ಸಿಟಿ) ಉಪನ್ಯಾಸಕನಾಗಿದ್ದ. ಆಕಾಂಕ್ಷ ಸಾವಿನ ಪ್ರಕರಣದಲ್ಲಿ ಈತನ ವಿರುದ್ಧ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಪಂಜಾಬ್‌ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.ಇಂದು ಮೃತದೇಹ ಆಗಮನ: ಪಂಜಾಬ್‌ನ ಸಿವಿಲ್ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ ಆಕಾಂಕ್ಷ ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಶವವನ್ನು ಮನೆಯವರಿಗೆ ಹಸ್ತಾಂತರಿಸಲಾಗಿದೆ. ಮಂಗಳವಾರ ರಾತ್ರಿ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದು, ಅಲ್ಲಿಂದ ಧರ್ಮಸ್ಥಳ ಬೊಳಿಯರ್ ಮನೆಗೆ ಆಂಬುಲೆನ್ಸ್ ಮೂಲಕ ಬುಧವಾರ ಬೆಳಗ್ಗೆ ಮೃತದೇಹ ಬರಲಿದೆ. ಬಳಿಕ ಅಂತ್ಯಸಂಸ್ಕಾರ ನೆರವೇರಲಿದೆ.

======

ಧರ್ಮಸ್ಥಳ ಬೊಳಿಯರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಯ 2ನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ದೆಹಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಮೇ 17ರಂದು ಪಂಜಾಬ್ ಪಗ್ವಾಡಾದಲ್ಲಿ ತಾನು ಕಲಿತ ಕಾಲೇಜಿನ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.ಕೆಲಸಕ್ಕಿದ್ದ ಕಂಪನಿಯಿಂದ ವಿಮಾನ ವ್ಯವಸ್ಥೆ: ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2 ಗಂಟೆಗೆ ತೆಗೆದುಕೊಂಡು ಬಂದಿದ್ದಾರೆ. ದೆಹಲಿ ವಿಮಾನ ನಿಲ್ದಾಣದಿಂದ ಆಕಾಂಕ್ಷ ಕೆಲಸ ಮಾಡುತ್ತಿದ್ದ ಕಂಪನಿಯ ವತಿಯಿಂದ ಉಚಿತ ವಿಮಾನ ವ್ಯವಸ್ಥೆ ಮಾಡಲಾಗಿದ್ದು, ಅದರಂತೆ