ಹಾಸನ: ಹಾರ್ಡ್‌ವೇರ್ ಅಂಗಡಿಯಲ್ಲಿ ತಡರಾತ್ರಿ ಕಳ್ಳತನಕ್ಕೆ ಯತ್ನ ನಡೆಸಿ, ಶಟರ್ ಮೀಟಿ ಅಂಗಡಿಗೆ ನುಗ್ಗಲು ಪ್ರಯತ್ನಿಸಿದರೂ ವಿಫಲಗೊಂಡು ಅಲ್ಲಿಂದ ಕಾಲ್ಕಿತ್ತ ಘಟನೆ ನಗರದ ಬಿ.ಟಿ. ಕೊಪ್ಪಲು ಬಳ, ಎಸ್.ಎಂ.ಕೆ ನಗರ ಸಮೀಪ ನಡೆದಿದೆ. ನಗರದ ಕುಲದೀಪ್ ಹಾರ್ಡ್‌ವೇರ್ ಅಂಗಡಿಯಲ್ಲಿ ತಡರಾತ್ರಿ ಕಳ್ಳತನಕ್ಕೆ ಯತ್ನಿಸಿ ವಿಫಲವಾಗಿದ್ದಾರೆ. ಭಾನುವಾರ ಮಧ್ಯರಾತ್ರಿ ಸಮಯದಲ್ಲಿ ಅಂಗಡಿಯ ಬಳಿ ಬಂದ ದುಷ್ಕರ್ಮಿಗಳು ಮೊದಲು ಸುತ್ತಮುತ್ತ ಪರಿಸ್ಥಿತಿಯನ್ನು ಪರಿಶೀಲಿಸಿ, ಬಳಿಕ ಅಂಗಡಿಯ ರೋಲಿಂಗ್ ಶಟರ್‌ನ್ನು ಬಲವಂತವಾಗಿ ಮುರಿಯಲು ಪ್ರಯತ್ನಿಸಿದ್ದಾರೆ. ಹಲವು ಬಾರಿ ಶಟರ್ ಎತ್ತಲು ಮತ್ತು ಲಾಕ್ ಮುರಿಯಲು ಯತ್ನಿಸಿದರೂ, ಭದ್ರವಾದ ಲಾಕ್ ವ್ಯವಸ್ಥೆಯಿಂದ ಅದು ಸಾಧ್ಯವಾಗಲಿಲ್ಲ. ಈ ವೇಳೆ ಸುತ್ತಮುತ್ತ ಯಾರಾದರೂ ಗಮನಿಸುವ ಸಾಧ್ಯತೆ ಕಂಡು, ದುಷ್ಕರ್ಮಿಗಳು ಆತುರದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಳ್ಳರ ಈ ಎಲ್ಲಾ ಚಟುವಟಿಕೆಗಳು ಅಂಗಡಿ ಮುಂಭಾಗ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿವೆ. ದೃಶ್ಯಾವಳಿಗಳಲ್ಲಿ ಇಬ್ಬರು ಅಥವಾ ಹೆಚ್ಚು ಮಂದಿ ಶಂಕಿತರು ಕಾಣಿಸಿಕೊಂಡಿದ್ದು, ಅವರು ಮುಖ ಮುಚ್ಚಿಕೊಂಡು ಕೃತ್ಯಕ್ಕೆ ಮುಂದಾಗಿದ್ದಾರೆ. ಪೊಲೀಸರು ಈ ದೃಶ್ಯಾವಳಿಗಳನ್ನು ಸಂಗ್ರಹಿಸಿ ಆರೋಪಿಗಳನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳೀಯ ವ್ಯಾಪಾರಿಗಳ ಪ್ರಕಾರ, ಕಳೆದ ಕೆಲವು ವಾರಗಳಿಂದ ಈ ಭಾಗದಲ್ಲಿ ಕಳ್ಳತನ ಹಾಗೂ ಕಳ್ಳತನ ಯತ್ನಗಳ ಪ್ರಮಾಣ ಏರಿಕೆಯಾಗಿದ್ದು, ವ್ಯಾಪಾರಿಗಳು ಭದ್ರತಾ ಕ್ರಮಗಳನ್ನು ಹೆಚ್ಚಿಸುವಂತಾಗಿದೆ. ರಾತ್ರಿ ವೇಳೆ ಪೊಲೀಸ್ ಪಹರೆ ಹೆಚ್ಚಿಸುವಂತೆ ಆಗ್ರಹಿಸಿದ್ದಾರೆ.ಈ ಘಟನೆಗೆ ಸಂಬಂಧಿಸಿದಂತೆ ಕೆ. ಆರ್. ಪುರಂ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಸಿಸಿಟಿವಿ ಆಧಾರದ ಮೇಲೆ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚುವುದಾಗಿ ಪೊಲೀಸರು ತಿಳಿಸಿದ್ದಾರೆ. ಜೊತೆಗೆ, ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿರುವ ಪೊಲೀಸರು, ಅಂಗಡಿಗಳಲ್ಲಿ ಹೆಚ್ಚುವರಿ ಭದ್ರತಾ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಹಾರ್ಡ್‌ವೇರ್ ಅಂಗಡಿಯಲ್ಲಿ ಕಳ್ಳತನ ಯತ್ನ
ಕಳ್ಳರ ಎಲ್ಲಾ ಚಟುವಟಿಕೆಗಳು ಅಂಗಡಿ ಮುಂಭಾಗ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿವೆ. ದೃಶ್ಯಾವಳಿಗಳಲ್ಲಿ ಇಬ್ಬರು ಅಥವಾ ಹೆಚ್ಚು ಮಂದಿ ಶಂಕಿತರು ಕಾಣಿಸಿಕೊಂಡಿದ್ದು, ಅವರು ಮುಖ ಮುಚ್ಚಿಕೊಂಡು ಕೃತ್ಯಕ್ಕೆ ಮುಂದಾಗಿದ್ದಾರೆ. ಪೊಲೀಸರು ಈ ದೃಶ್ಯಾವಳಿಗಳನ್ನು ಸಂಗ್ರಹಿಸಿ ಆರೋಪಿಗಳನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳೀಯ ವ್ಯಾಪಾರಿಗಳ ಪ್ರಕಾರ, ಕಳೆದ ಕೆಲವು ವಾರಗಳಿಂದ ಈ ಭಾಗದಲ್ಲಿ ಕಳ್ಳತನ ಹಾಗೂ ಕಳ್ಳತನ ಯತ್ನಗಳ ಪ್ರಮಾಣ ಏರಿಕೆಯಾಗಿದ್ದು, ವ್ಯಾಪಾರಿಗಳು ಭದ್ರತಾ ಕ್ರಮಗಳನ್ನು ಹೆಚ್ಚಿಸುವಂತಾಗಿದೆ. ರಾತ್ರಿ ವೇಳೆ ಪೊಲೀಸ್ ಪಹರೆ ಹೆಚ್ಚಿಸುವಂತೆ ಆಗ್ರಹಿಸಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.