ಸಾರಾಂಶ
ಬಸ್ ನಿಲ್ದಾಣದಿಂದ ಸುಮಾರು 500 ಮೀಟರ್ ದೂರದಲ್ಲಿರುವ ಈ ಕಚೇರಿಯಲ್ಲಿ ಕಳ್ಳತನ ಕಂಡುಬಂದಿವೆ. ಸ್ಥಳಕ್ಕೆ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಉಪತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ತಡರಾತ್ರಿ ಕಳ್ಳತನದ ವಿಫಲ ಪ್ರಯತ್ನ ನಡೆದಿದೆ.
ಮಂಗಳವಾರ ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಕಚೇರಿಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿದರೂ, ಮೇಲ್ನೋಟಕ್ಕೆ ಯಾವುದೇ ವಸ್ತು ಕಳವು ಆಗಿಲ್ಲ ಎಂಬುದು ತಿಳಿದುಬಂದಿದೆ.ಬಸ್ ನಿಲ್ದಾಣದಿಂದ ಸುಮಾರು 500 ಮೀಟರ್ ದೂರದಲ್ಲಿರುವ ಈ ಕಚೇರಿಯಲ್ಲಿ ಕಳ್ಳತನ ಕಂಡುಬಂದಿವೆ. ಸ್ಥಳಕ್ಕೆ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಇತ್ತೀಚಿನ ದಿನಗಳಲ್ಲಿ ಇಂತಹ ಪ್ರಕರಣಗಳು ಸಾಮಾನ್ಯವಾಗಿರುವ ಹಿನ್ನೆಲೆಯಲ್ಲಿ ಗ್ರಾಮಾಂತರ ಪೊಲೀಸ್ ಗಸ್ತು ಹೆಚ್ಚಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.ಫೋಟೋ-30ಕೆಡಿಬಿಪಿ2- ತೂಬಗೆರೆ ಉಪತಹಶೀಲ್ದಾರ್ ಕಚೇರಿ.