ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್. ನಗರ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದರೆ ಉನ್ನತ ಶಿಕ್ಷಣ ಪಡೆದು ಉತ್ತಮ ಸ್ಥಾನ ಪಡೆಯಬಹುದು ಎಂದು ಶಾಸಕ ಡಿ. ರವಿಶಂಕರ್ ಹೇಳಿದರು.ಪಟ್ಟಣದ ಶಿಕ್ಷಕರ ಭವನದ ಬಳಿ ಇರುವ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳ ಉಳಿವಿಗೆ ನಮ್ಮೊಂದಿಗೆ ಸಾಂಪ್ರದಾಯಿಕ ಸಾರ್ವಜನಿಕರು ಸಹಕಾರ ನೀಡಬೇಕು. ಮಕ್ಕಳ ಭವಿಷ್ಯ ರೂಪಿಸುವ ಮಹತ್ವದ ಜವಬ್ದಾರಿ ಶಿಕ್ಷಕರ ಮೇಲಿದ್ದು ಅದನ್ನು ಅರಿತು ಜಬ್ದಾರಿಯುತವಾಗಿ ಶಿಕ್ಷಕರುಗಳು ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಕೆ.ಆರ್. ನಗರ ಮತ್ತು ಸಾಲಿಗ್ರಾಮ ತಾಲೂಕುಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಒಂದು ಕ್ರಮಾಂಕ ಕುಸಿದಿದ್ದು, ಈ ವಿಚಾರ ಬೇಸರ ತಂದಿದೆ ಎಂದು ನೊಂದು ನುಡಿದ ಶಾಸಕರು ಇಂದಿನಿಂದಲೇ ಕಾರ್ಯ ಯೋಜನೆ ರೂಪಿಸಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಉನ್ನತ ಸ್ಥಾನಕ್ಕೇರಲು ಪ್ರಯತ್ನಿಸಿ ಎಂದು ಸಲಹೆ ನೀಡಿದರು. ತಹಸೀಲ್ದಾರ್ ಜಿ. ಸುರೇಂದ್ರಮೂರ್ತಿ, ಬಿಇಒ ಆರ್. ಕೃಷ್ಣಪ್ಪ, ಬಿಆರ್.ಸಿ ವೆಂಕಟೇಶ್, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎನ್. ಸ್ವಾಮಿ, ಎಸ್.ಡಿಎಂಸಿ ಅಧ್ಯಕ್ಷೆ ಮಹದೇವಿ, ಸದಸ್ಯ ಅಸ್ಲಾಂ, ಶಾಲೆಗೆ ಕೊಡುಗೆ ನೀಡಿದ ದಾನಿಗಳಾದ ಚಂದ್ರಶೇಖರ್, ಎನ್. ಶಿವಕುಮಾರ್, ಅರುಣ್ ಬಿ. ನರಗುಂದ್, ಸತ್ಯನಾರಾಯಣ, ಇಸಿಒಗಳಾದ ದಾಸಪ್ಪ, ಪೂರ್ಣಿಮಾ, ಜಗದೀಶ್, ಸಿಆರ್ ಪಿ ಎಚ್.ಎಸ್. ಹರಿಪ್ರಸಾದ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸ್ವಾಮೀಗೌಡ, ಶಾಲಾ ಮುಖ್ಯ ಶಿಕ್ಷಕ ಒಂಟಿಮನೆ ನಾಗರಾಜು, ಶಿಕ್ಷಕರಾದ ರವಿ, ರೂಪ, ರುಕ್ಮಿಣಿ, ಜ್ಯೋತಿ ಪೆರಾರ, ನೇತ್ರಾವತಿ, ರೇವತಿ, ವಿದ್ಯಾರ್ಥಿಗಳು, ಪೋಷಕರು ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))