ಸಾರಾಂಶ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದಿಂದ ಮೊಟಕುಗೊಂಡಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭ ಗಾಂಧಿ ಭಾರತ ಕಾರ್ಯಕ್ರಮ ಜ.21ರಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಅತ್ಯಂತ ಅದ್ಧೂರಿಯಾಗಿ ಅನಾವರಣಗೊಳ್ಳಲಿದೆ. ಈ ಕಾರ್ಯಕ್ರಮಕ್ಕೆ ಕ್ಷೇತ್ರದಿಂದ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕ, ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಕರೆ ನೀಡಿದರು.
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದಿಂದ ಮೊಟಕುಗೊಂಡಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭ ಗಾಂಧಿ ಭಾರತ ಕಾರ್ಯಕ್ರಮ ಜ.21ರಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಅತ್ಯಂತ ಅದ್ಧೂರಿಯಾಗಿ ಅನಾವರಣಗೊಳ್ಳಲಿದೆ. ಈ ಕಾರ್ಯಕ್ರಮಕ್ಕೆ ಕ್ಷೇತ್ರದಿಂದ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕ, ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಕರೆ ನೀಡಿದರು.ಪಟ್ಟಣದ ಹುಡ್ಕೋ ಬಡಾವಣೆಯ ಗೃಹ ಕಚೇರಿಯಲ್ಲಿ ನಡೆದ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆಯ ಐತಿಹಾಸಿಕ ಕಾರ್ಯಕ್ರಮವಾಗಿ ವಿಜೃಂಭಿಸಲಿದೆ. ದೇಶದ ಇತಿಹಾಸವನ್ನು ಸಂಭ್ರಮಿಸಲು ಈ ಕಾರ್ಯಕ್ರಮಕ್ಕೆ ಆಯೋಜಿಸಲಾಗಿದೆ. ಬೆಳಗಾವಿಯು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದೆ. ದೇಶ, ರಾಜ್ಯದ ವಿವಿಧ ಭಾಗಗಳಿಂದ ಅಂದಾಜು 1.50 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ. ಬೆಳಗಾವಿಯ ಗಲ್ಲಿಗಲ್ಲಿಗಳಲ್ಲಿ ಮಹಾತ್ಮಗಾಂಧಿ ಹೆಜ್ಜೆ ಗುರುತುಗಳನ್ನು ನೆನಪಿಸುವ ಸ್ವಾತಂತ್ರ್ಯ ಹೋರಾಟದ ಸನ್ನಿವೇಶವನ್ನು ಜನರಿಗೆ ಪರಿಚಯಿಸುವ ಉದ್ದೇಶ ಇದಾಗಿದೆ ಎಂದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯಿಂದಾಗಿ ಸರ್ಕಾರ ದಿವಾಳಿಯಾಗಿದೆ ಎಂಬ ವಿರೋಧ ಪಕ್ಷದವರ ಟೀಕಿಸುತ್ತಿದ್ದಾರೆ. ನಮ್ಮ ಮುಖ್ಯಮಂತ್ರಿ ಸಿದ್ರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಐದು ಬಹುಮುಖ್ಯ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ ಯಾವುದೇ ತೊಂದರೆಯಾಗಿಲ್ಲ. ಆದರೆ, ಹಿಂದಿನ ಬಿಜೆಪಿ ಅವಧಿಯಲ್ಲಿ ಯಾವುದೇ ಹಣಕಾಸು ಇಲಾಖೆಯ ಪರವಾನಿಗೆ ಇಲ್ಲದೇ ಬೇಕಾಬಿಟ್ಟಿ ಕಾಮಗಾರಿ ಹೆಸರಲ್ಲಿ ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ಉಳಿಸಿಕೊಂಡಿದ್ದರಿಂದ ಕೊಂಚ ತೊಂದರೆಯಾಗಿದೆ, ವಿನಃ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಲ್ಲ. ಇಂತಹ ಸುಳ್ಳು ಹೇಳಿಕೆ ನೀಡುವ ಮೂಲಕ ಜನರಿಗೆ ಸಂದೇಶ ನೀಡುವ ವಿರೋಧ ಪಕ್ಷದವರ ಟೀಕೆಗಳನ್ನು ಜನರು ಗಂಭೀರವಾಗಿ ಪರಿಗಣಿಸುವುದಿಲ್ಲ. ಜನಪರ ಆಡಳಿತ ನೀಡುತ್ತಿರುವ ನಮ್ಮ ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮುಖಂಡರು ಹಾಗೂ ಕಾರ್ಯಕರ್ತರು ಮುಂದಾಗಬೇಕು ಎಂದು ಹೇಳಿದರು.ಅಫ್ಜಲ್‌ಪುರ ಶಾಸಕ ಎಂ.ಎ.ಪಾಟೀಲ ಮಾತನಾಡಿ, ಶಾಸಕ ಸಿ.ಎಸ್.ನಾಡಗೌಡ ಅವರು 6 ಬಾರಿ ಭರ್ಜರಿ ಗೆಲುವು ಸಾಧಿಸಿದ್ದಲ್ಲದೇ ಪಕ್ಷದ ಹಲವಾರು ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡಿದ ಅನುಭವಿ ರಾಜಕಾರಿಣಿ. ಆದರೆ, ವರಿಷ್ಠರು ನನ್ನನ್ನು ಉಸ್ತುವಾರಿಯಾಗಿ ಕಳುಹಿಸಿದ್ದರಿಂದ ಬಂದಿದ್ದೇನೆ. ಯಾವುದೇ ವೈಮನಸ್ಸುಗಳನ್ನು ಇಟ್ಟುಕೊಳ್ಳದೇ ಪಕ್ಷದ ಶಕ್ತಿ ಬಲಪಡಿಸಲು ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸುವಂತೆ ಮನವಿ ಮಾಡಿದರು.ಈ ವೇಳೆ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ತಾಲೂಕಾ ಸರ್ಕಾರಿ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಪುರಸಭೆ ಅಧ್ಯಕ್ಷ ಮೈಬೂಬ ಗೊಳಸಂಗಿ, ಮುಖಂಡರಾದ ಮತೀನ ಪಟೇಲ, ಸಿದ್ದಣ್ಣ ಮೇಟಿ, ಕಾಮರಾಜ ಬಿರಾದಾರ, ವೈ.ಎಚ್.ವಿಜಯಕರ, ಲಕ್ಷ್ಮಣ ಚವ್ಹಾಣ, ಬಾಪುಗೌಡ ಪೀರಾಪೂರ, ರಾಜುಗೌಡ ರಾಯಗೊಂಡ, ತಿಪ್ಪಣ್ಣ ದೊಡಮನಿ, ಸಿ.ಜಿ. ವಿಜಯಕರ, ಸುರೇಶ ಪಾಟೀಲ, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯಕಮಕ್ಕಳ, ಸಂಗನಗೌಡ ಪಾಟೀಲ, ಗೋಪಿ ಪಡಿವಾಳರ, ಸೇರಿದಂತೆ ಹಲವರು ಇದ್ದರು.