ಮಕ್ಕಳಲ್ಲಿ ತಂದೆ-ತಾಯಿ, ಗುರುಗಳು ಹಾಗೂ ಹಿರಿಯರ ಬಗ್ಗೆ ಗೌರವ ಬೆಳೆಸುವ ನಿಟ್ಟಿನಲ್ಲಿ ಚಿಕ್ಕ ವಯಸ್ಸಿನಲ್ಲೇ ಉತ್ತಮ ಸಂಸ್ಕಾರಗಳನ್ನು ಬೆಳೆಸುವುದು ಇದರ ಉದ್ದೇಶವಾಗಿದೆ. ಕಳೆದ 78 ವರ್ಷಗಳಿಂದ ಈ ಕಾರ್ಯಕ್ರಮವನ್ನು ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದ್ದು, ಪೋಷಕರ ಸಹಕಾರವೂ ಅಪಾರವಾಗಿದೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ ಪಿಯುಸಿ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಪೋಷಕರಿಗೆ ಪಾದಪೂಜೆ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.

ವಿದ್ಯಾಭ್ಯಾಸದ ಜೊತೆಗೆ ಸಂಸ್ಕಾರಕ್ಕೂ ಆದ್ಯತೆ ನೀಡುವ ಉದ್ದೇಶದಿಂದ ನಾನಾ ವೇದ ಮಂತ್ರೋಚ್ಚಾರಣೆ, ಸಂಕಲ್ಪಗಳೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳ ಪುತ್ಥಳಿಗೆ ಪೂಜೆ ಸಲ್ಲಿಸಲಾಯಿತು.

ಬಳಿಕ ಮಾತನಾಡಿದ ಹೇಮಗಿರಿ ಶಾಖಾ ಮಠದ ಗೌರವ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡರು, ಕಳೆದ 78 ವರ್ಷಗಳಿಂದ ಈ ಕಾರ್ಯಕ್ರಮವನ್ನು ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದ್ದು, ಪೋಷಕರ ಸಹಕಾರವೂ ಅಪಾರವಾಗಿದೆ ಎಂದರು.

ಮಕ್ಕಳಲ್ಲಿ ತಂದೆ-ತಾಯಿ, ಗುರುಗಳು ಹಾಗೂ ಹಿರಿಯರ ಬಗ್ಗೆ ಗೌರವ ಬೆಳೆಸುವ ನಿಟ್ಟಿನಲ್ಲಿ ಚಿಕ್ಕ ವಯಸ್ಸಿನಲ್ಲೇ ಉತ್ತಮ ಸಂಸ್ಕಾರಗಳನ್ನು ಬೆಳೆಸುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು.

ಈ ವೇಳೆ ಪತ್ರಕರ್ತರಾದ ಎಸ್.ನಾಗಸುಂದರ್, ಎಸ್.ರವಿಕುಮಾರ್, ಕೃಷ್ಣೇಗೌಡ ಸೇರಿದಂತೆ ಪೋಷಕರು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ನಿವೃತ್ತ ಮುಖ್ಯಶಿಕ್ಷಕ ಬಿ.ರಮೇಶ್ ಗೆ ವಾಯುವಿಹಾರಿಗಳ ಸಂಘದಿಂದ ಅಭಿನಂದನೆ

ಪಾಂಡವಪುರ:

ವಯೋ ನಿವೃತ್ತರಾದ ತಾಲೂಕಿನ ಸಣಬ ಗ್ರಾಮದ ಬಡಾವಣೆಯ ಸರ್ಕಾರಿ ಪ್ರೌಢ ಶಾಲೆ ಮುಖ್ಯಶಿಕ್ಷಕ ಬಿ.ರಮೇಶ್ ಅವರನ್ನು ಪಟ್ಟಣದ ಕಸಾಪ ಭವನದಲ್ಲಿ ವಾಯುವಿಹಾರಿಗಳ ಸಂಘದ ಪದಾಧಿಕಾರಿಗಳು ಅಭಿನಂದಿಸಿದರು.

ಈ ವೇಳೆ ಮಾತನಾಡಿದ ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಕುಮಾರಸ್ವಾಮಿ ಅವರು, ಬಿ.ರಮೇಶ್ ಅವರು ಮುಖ್ಯ ಶಿಕ್ಷಕರಾಗಿ ಸಮಾಜದಲ್ಲಿ ಉತ್ತಮ ಹೆಸರುಗಳಿಸಿದ್ದಾರೆ. ಶಿಕ್ಷಕ ವೃತ್ತಿಯಲ್ಲಿ ಪ್ರಾಮಾಣಿಕ ಸೇವೆ ಮಾಡಿ ವಿದ್ಯಾರ್ಥಿಗಳ ಮನಗೆದ್ದ ಶಿಕ್ಷಕರಾಗಿ ಪೋಷಕರ ವಿಶ್ವಾಸಗಳಿಸಿರುವುದು ಅವರ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ. ತಮ್ಮ ವೃತ್ತಿ ಜೀವನದಲ್ಲಿ ಕಪ್ಪು ಚುಕ್ಕಿ ಇಲ್ಲದಂತೆ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದಾರೆ ಎಂದು ಶ್ಲಾಘಿಸಿದರು.

ಅಭಿನಂದನೆ ಸ್ವೀಕರಿಸಿದ ನಿವೃತ್ತ ಮುಖ್ಯಶಿಕ್ಷಕ ಬಿ.ರಮೇಶ್, ಸರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸಿ ಯಶಸ್ವಿಯಾಗುವುದು ಬಹಳ ಸವಾಲಿನ ಕೆಲಸ ಎಂದರು.

ಈ ವೇಳೆ ವಾಯುವಿಹಾರಿಗಳ ಸಂಘದ ಅಧ್ಯಕ್ಷ ಕೃಷ್ಣೇಗೌಡ, ಕಾರ್ಯದರ್ಶಿ ನಾಗರಾಜ್, ಕಸಾಪ ಅಧ್ಯಕ್ಷ ಪ್ರಕಾಶ್, ರಾಮೇಗೌಡ, ಪ್ರೋ.ಬಿ.ನಾರಾಯಣಗೌಡ, ಚಂದ್ರಶೇಖರಯ್ಯ, ಆನಂದ್, ದೇವೇಗೌಡ, ಮಲ್ಲಿಕಾರ್ಜುನ, ಉಪಸ್ಥಿತರಿದ್ದರು.