ಸಾರಾಂಶ
ಕನ್ನಡಪ್ರಭ ವಾರ್ತೆ ಮಾಲೂರು
ಆರೋಗ್ಯವೆ ಮಹಾಭಾಗ್ಯ. ಚಿಕಿತ್ಸಾ ಸೌಲಭ್ಯದಿಂದ ವಂಚಿತರಾಗದೆ ಗ್ರಾಮೀಣ ಭಾಗದ ಜನತೆ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುವಂತೆ ಶಾಸಕ ಕೆ.ವೈನಂಜೇಗೌಡ ಹೇಳಿದರು.ತಾಲೂಕಿನ ಕಸಬಾ ಹೋಬಳಿಯ ಅಬ್ಬೇನಹಳ್ಳಿ ಗ್ರಾಮದ ಶಾಲಾ ಆವರಣದಲ್ಲಿ ಎಂ.ವಿ.ಜೆ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆ ಹೊಸಕೋಟೆ ಹಾಗೂ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಗ್ರಾಮೀಣ ಭಾಗದ ಜನತೆಗೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಮಲ್ಟಿ ಸ್ಪೆಷಾಲಿಟಿ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಆರೋಗ್ಯಕ್ಕೆ ಗಮನ ನೀಡುತ್ತಿಲ್ಲಗ್ರಾಮೀಣ ಭಾಗದಲ್ಲಿ ಜನರು ಹೆಚ್ಚಾಗಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರಿಂದ ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುವುದಿಲ್ಲ. ಇದರಿಂದ ರೋಗಗಳು ಉಲ್ಬಣಗೊಳ್ಳುತ್ತವೆ. ರೋಗಗಳನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು ಹೆಚ್ಚಿನ ಪಾತ್ರ ವಹಿಸುತ್ತವೆ. ಆದ್ದರಿಂದ ಗ್ರಾಮ ಪಂಚಾಯಿತಿಗಳು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಯೋಗದಲ್ಲಿ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲು ಸೂಚಿಸಲಾಗಿತ್ತು ಎಂದರು.
ಈ ಹಿನ್ನೆಲೆಯಲ್ಲಿ ತಾಲೂಕಿನ ಅತ್ಯಂತ ೨೮ ಪಂಚಾಯಿತಿಗಳಲ್ಲಿ ಗ್ರಾಮ ಪಂಚಾಯಿತಿ ಹಾಗೂ ಎಂವಿಜೆ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆ ಸಹಯೋಗದಲ್ಲಿ ತಿಂಗಳ ಪ್ರತಿ ಮಂಗಳವಾರದಂದು ಗ್ರಾಮ ಪಂಚಾಯಿತಿ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಮಲ್ಟಿ ಸ್ಪೆಷಾಲಿಟಿ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗುತ್ತಿದೆ ಎಂದರು.ಆರೋಗ್ಯ ತಪಾಸಣಾ ಶಿಬಿರ
ಎಂವಿಜೆ ವೈದ್ಯಕೀಯ ಕಾಲೇಜಿನ ನಿರ್ದೇಶಕ ಪ್ರಮೋದ್ ಮಾತನಾಡಿ, ಗ್ರಾಮೀಣ ಪ್ರದೇಶದ ಜನರು ತಮ್ಮ ಕೆಲಸ ಕಾರ್ಯಗಳ ನಡುವೆ ಆರೋಗ್ಯದ ಕಡೆ ಹೆಚ್ಚು ಗಮನಹರಿಸಲು ಆಗುವುದಿಲ್ಲ ಇಂತಹ ಆರೋಗ್ಯ ಶಿಬಿರಗಳು ಸಹಕಾರಿಯಾಗಲಿದೆ. ತಪಾಸಣೆಯ ಜೊತೆಗೆ ಮಲ್ಟಿ ಸ್ಪೆಷಾಲಿಟಿ ಚಿಕಿತ್ಸೆಯನ್ನು ಸಹ ಕೊಡಿಸಲಾಗುವುದು. ಆರೋಗ್ಯ ತಪಾಸಣಾ ಶಿಬಿರದಲ್ಲಿ ದೊಡ್ಡ ಕಾಯಿಲೆ ಇರುವವರನ್ನು ಗುರುತಿಸಿ ಅಂತಹವರನ್ನು ಎಂವಿಜಿ ಆಸ್ಪತ್ರೆಯಲ್ಲಿ ಉಚಿತವಾಗಿ ಪಂಚಾಯಿತಿ ಕೇಂದ್ರದಿಂದ ಬಸ್ಸುಗಳ ಮೂಲಕ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗುವುದು ಎಂದರು.ಇಎಸ್‌ಐ, ಯಶಸ್ವಿನಿ, ಆಯುಷ್ಮಾನ್, ಬಿಪಿಎಲ್ ಕಾರ್ಡ್ ಉಳ್ಳವರಿಗೆ, ಅಲ್ಲದೆ ಇವು ಯಾವುದು ಇಲ್ಲದವರನ್ನು ಎಂವಿಜೆ ಆಸ್ಪತ್ರೆಯ ವಿಶೇಷ ಅನುದಾನದ ಅಡಿ ಚಿಕಿತ್ಸೆಯನ್ನು ನೀಡಲಾಗುವುದು ಇಲ್ಲಿನ ೨೮ ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿ ಮಂಗಳವಾರ ಶಾಸಕರು ಹಾಗೂ ಗ್ರಾಮ ಪಂಚಾಯಿತಿ ಸಹಕಾರದಿಂದ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಜಮುನಾ ಬಾಯಿ ಉಪಾಧ್ಯಕ್ಷ ಜಯರಾಮ್, ಕಾಂಗ್ರೆಸ್ ಹಿಂದುಳಿದ ವರ್ಗÀಗಳ ರಾಜ್ಯ ಪ್ರಧಾನಕಾರ್ಯದರ್ಶಿ ಭಾವನಹಳ್ಳಿ ಮುರಳಿಧರ್ ಯಾದವ್, ಸದಸ್ಯರಾದ ಶ್ರೀನಿವಾಸ್, ಶಿವಶಂಕರ್, ಮಂಜುನಾಥ್ ಬಿ.ಸಿ., ಶೋಭ, ಮುನಿವೆಂಕಟಮ್ಮ, ಮಂಜುನಾಥ್, ತಸ್ಲಿಮಾ ನಯಾಜ್ ಪಾಷ, ಪಿಡಿಒ ದೀಪಾ, ಕಾರ್ಯದರ್ಶಿ ತುಳಸಿರಾಮ್, ಎಂ.ವಿ.ಜೆ.ಆಸ್ಪತ್ರೆಯ ಶ್ರೀನಾಥ್, ಸಿಬ್ಬಂದಿವರ್ಗ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಹಾಜರಿದ್ದರು.