ಕನ್ನಡಪ್ರಭ ವಾರ್ತೆ ಮಡಿಕೇರಿ

ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು.

ಕೊಡಗು ಜಿಲ್ಲಾ ಬ್ಯುಟೀಷಿಯನ್ ಅಸೋಸಿಯೇಷನ್ ವತಿಯಿಂದ ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಇತರರ ಸೌಂದರ್ಯದ ಬಗ್ಗೆ ಕಾಳಜಿ ವಹಿಸುವ ಸೌಂದರ್ಯ ತಜ್ಞರು ಕಳೆದ ಮೂರು ವರ್ಷಗಳಿಂದ ತಾವುಗಳು ಪಾಲ್ಗೊಂಡು ಕ್ರೀಡಾ ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು.ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಜಿಲ್ಲಾ ಬ್ಯುಟಿಶಿಯನ್ ಅಸೋಸಿಯೇಷನ್ ಸಂಸ್ಥಾಪಕರು ಹಾಗೂ ಗೌರವಾಧ್ಯಕ್ಷರಾದ ವನಿತಾ ಚಂದ್ರಮೋಹನ್ ಮಾತನಾಡಿ, ಕ್ರೀಡೆ ಮೂಲಕ ಪರಸ್ಪರ ಬಾಂಧವ್ಯ ಬೆಳೆಯಲು ಸಾಧ್ಯ ಎಂದ ಅವರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ ಹೊರತು ಗೆಲುವು ಮುಖ್ಯವಲ್ಲ ಎಂದರು.ಒಗ್ಗಟ್ಟಿನ ಮೂಲಕ ಪ್ರತಿಯೊಬ್ಬರು ಸಂಘದಲ್ಲಿ ಚರ್ಚಿಸಿ ತಮ್ಮ ಸಮಸ್ಯೆಗೆ ಪರಿಹಾರ ಹುಡುಕುವ ಕೆಲಸವಾಗಬೇಕು ಎಂದು ಹೇಳಿದರು.ಜಿಲ್ಲಾ ಅಧ್ಯಕ್ಷರಾದ ರತ್ನ ಯತೀಶ್ ಅವರು ಕ್ರೀಡಾಕೂಟಕ್ಕೆ ಶುಭ ಕೋರಿ ಸಂಘಟನೆಯ ಬಲವರ್ಧನೆಗೆ ಪ್ರತಿಯೊಬ್ಬರೂ ಕೈಜೋಡಿಸುವಂತೆ ಕೋರಿದರು. ತಾಲೂಕು ಸಂಘಗಳ ತಂಡಗಳ ನಡುವೆ ಥ್ರೋ ಬಾಲ್, ಹಗ್ಗ ಜಗ್ಗಾಟ, ಶಾಟ್ ಪುಟ್, ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.ಸಂಘದ ಉಪಾಧ್ಯಕ್ಷರಾದ ಮಿನಾಜ್ ಪ್ರವೀಣ್, ಪ್ರಧಾನ ಕಾರ್ಯದರ್ಶಿ ಪವಿತ್ರ ರೈ, ಚೇತನ, ಸಂಘಟನಾ ಕಾರ್ಯದರ್ಶಿ ಸಂಧ್ಯಾ ರಂಜನ್, ಖಜಾಂಚಿ ವೈಭವಿ ಸಹ ಖಜಾಂಚಿ ತಾಜ್ ಮತ್ತು ತಾಲೂಕು ಅಧ್ಯಕ್ಷರಾದ ಝಾನ್ಸಿರಾಜ್, ಪ್ರತಿಮಾ ನಾಗಮಣಿ, ಸುಮಿತ ವಾಸು ಮತ್ತು ಆಡಳಿತ ಮಂಡಳಿ ಸದಸ್ಯರು ಇದ್ದರು. ಸೋಮವಾರಪೇಟೆ ತಾಲೂಕು ಅಧ್ಯಕ್ಷರಾದ ಪ್ರತಿಮಾ ಸ್ವಾಗತಿಸಿದರು. ಜಿಲ್ಲಾ ಸಂಘದ ನಿರ್ದೇಶಕಿ ನವ್ಯ ಕಾರ್ಯಕ್ರಮ ನಿರೂಪಿಸಿದರು. ಮಡಿಕೇರಿ ತಾಲೂಕು ಉಪಾಧ್ಯಕ್ಷರಾದ ಸರಿತಾ ಈಶ ವಂದಿಸಿದರು.