ತಂತ್ರಜ್ಞಾನದತ್ತ ಯುವಕರ ಒಲವು ಹೆಚ್ಚಾಗುತ್ತಿರುವುದು, ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆಯದಿರುವುದು, ಹವಾಮಾನ ವೈಪರೀತ್ಯ, ಸಮಾಜದಲ್ಲಿ ಕೃಷಿಗೆ ಸಿಗದ ಗೌರವ ಹಾಗೂ ಪಠ್ಯಕ್ರಮದಲ್ಲಿ ಕೃಷಿ ಜಾಗೃತಿಗೆ ಆದ್ಯತೆ ಇಲ್ಲದಿರುವುದು ಸೇರಿದಂತೆ ಹಲವು ಕಾರಣಗಳಿಂದ ಯುವ ಪೀಳಿಗೆ ಕೃಷಿಯಿಂದ ವಿಮುಖ ವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೃಷಿ ಡಿಪ್ಲೊಮಾ ಕಾಲೇಜಿನ ಉಪನ್ಯಾಸಕ ಸುನೀಲಕುಮಾರ ಎಂ.ಎನ್. ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಬೀದರ್

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಡಾ.ಬಸವರಾಜ ಬಲ್ಲೂರ ಅವರ ಸರ್ವಾಧ್ಯಕ್ಷತೆಯಲ್ಲಿ ನಗರದ ಡಾ.ಚನ್ನಬಸ ಪಟ್ಟದೇವರು ರಂಗಮಂದಿರದಲ್ಲಿ ಆಯೋಜಿಸಿದ್ದ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಯುವ ಪೀಳಿಗೆ ಮತ್ತು ಕೃಷಿ ವಿಮುಖತೆ’ ವಿಷಯದ ಕುರಿತು ಉಪನ್ಯಾಸ ನೀಡಿ, ಇಂದಿನ ಯುವಕರು ಕೃಷಿಯಿಂದ ದೂರ ಸರಿಯುತ್ತಿರುವುದು ಭವಿಷ್ಯದ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಆಹಾರದ ಕೊರತೆಯನ್ನೂ ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು. ಆದ್ದರಿಂದ ಯುವಕರನ್ನು ಕೃಷಿಯತ್ತ ಆಕರ್ಷಿಸುವುದು ಇಂದಿನ ತುರ್ತು ಆದ್ಯತೆಯಾಗಬೇಕಿದೆ ಎಂದು ಹೇಳಿದರು.

ಕೃಷಿಯನ್ನು ಲಾಭದಾಯಕವಾಗಿಸುವುದರ ಜೊತೆಗೆ ಆಧುನಿಕ ತಂತ್ರಜ್ಞಾನ ಮತ್ತು ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಯುವಕರಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡಿಸಬಹುದು. ಮಣ್ಣಿನ ಗುಣಮಟ್ಟ, ಹವಾಮಾನ ಹಾಗೂ ತೇವಾಂಶದ ಆಧಾರದ ಮೇಲೆ ಹದ ನೋಡಿ ಬಿತ್ತನೆ ಮಾಡಬೇಕು. ಉತ್ತಮ ಗುಣಮಟ್ಟದ ಬೀಜಗಳನ್ನು ಆಯ್ಕೆ ಮಾಡಬೇಕು. ನಮ್ಮ ಮಣ್ಣಿಗೆ ಹಾಗೂ ಹವಾಮಾನಕ್ಕೆ ಹೊಂದಿಕೊಳ್ಳುವ ಸ್ಥಳೀಯ ತಳಿಗಳಿಗೆ ಆದ್ಯತೆ ನೀಡಬೇಕು. ಕೃಷಿಗೆ ಲಭ್ಯವಿರುವ ನೀರು, ಭೂಮಿ ಸೇರಿದಂತೆ ಎಲ್ಲ ಸಂಪನ್ಮೂಲಗಳನ್ನು ಸರ್ಪಬಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರೈತರು ಸಾಂಪ್ರದಾಯಿಕ ಏಕಬೆಳೆ ಪದ್ಧತಿಗೆ ಸೀಮಿತವಾಗದೆ ಬಹುಬೆಳೆ ಪದ್ಧತಿಯನ್ನು ಅನುಸರಿಸಬೇಕು. ಇದರಿಂದ ಬೆಳೆ ನಷ್ಟದ ಅಪಾಯವನ್ನು ಕಡಿಮೆ ಮಾಡುವುದರ ಜೊತೆಗೆ ಆದಾಯವನ್ನೂ ಹೆಚ್ಚಿಸಿಕೊಳ್ಳಲು ಸಾಧ್ಯವಿದೆ. ಕೃಷಿಯಲ್ಲಿ ಹೊಸ ಪ್ರಯೋಗಗಳು, ಆಧುನಿಕ ತಂತ್ರಜ್ಞಾನ, ವೈಜ್ಞಾನಿಕ ಚಿಂತನೆ ಮತ್ತು ಮೌಲ್ಯರ್ಧಪನೆಗೆ ಆದ್ಯತೆ ನೀಡಿದಾಗ ಕೃಷಿ ಕ್ಷೇತ್ರವನ್ನು ಮತ್ತಷ್ಟು ಸದೃಢಗೊಳಿಸಬಹುದು ಎಂದರು.