ಅತ್ತೂರು ಸಂತ ಲಾರೆನ್ಸ್‌ ಬಸಿಲಿಕಿ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವ ಆರಂಭ

| Published : Jan 22 2024, 02:18 AM IST

ಅತ್ತೂರು ಸಂತ ಲಾರೆನ್ಸ್‌ ಬಸಿಲಿಕಿ ಪುಣ್ಯಕ್ಷೇತ್ರ ವಾರ್ಷಿಕ ಮಹೋತ್ಸವ ಆರಂಭ
Share this Article
  • FB
  • TW
  • Linkdin
  • Email

ಸಾರಾಂಶ

ಪುಣ್ಯಕ್ಷೇತ್ರದ ಸಂತ ಲಾರೆನ್ಸರ ಪವಿತ್ರ ಅವಶೇಷವನ್ನು ಹಾಗು ಪವಾಡ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಸಾರ್ವಜನಿಕರ ದರ್ಶನಕ್ಕಾಗಿ ಮಂಟಪದಲ್ಲಿ ಪ್ರತಿಷ್ಠಾಪಿಸಿದರು. ನಂತರ ಉದಯ ಕುಮಾರ್ ಶೆಟ್ಟಿ ಮುನಿಯಾಲು ಧ್ವಜರೋಹಣ ಮೂಲಕ ಮಹೋತ್ಸವಕ್ಕೆ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಕಾರ್ಕಳಅತ್ತೂರು ಕಾರ್ಕಳ ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ಆರಂಭಗೊಂಡಿತು. ಮಹೋತ್ಸವವು 6 ದಿನಗಳ ಕಾಲ 21 ರಿಂದ 26 ರವೆರೆಗೆ ನಡೆಯಲಿದೆ. ಭಾನುವಾರ ಬೆಳಗ್ಗೆ ಪುಣ್ಯಕ್ಷೇತ್ರದ ಸಂತ ಲಾರೆನ್ಸರ ಪವಿತ್ರ ಅವಶೇಷವನ್ನು ಹಾಗು ಪವಾಡ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಸಾರ್ವಜನಿಕರ ದರ್ಶನಕ್ಕಾಗಿ ಮಂಟಪದಲ್ಲಿ ಪ್ರತಿಷ್ಠಾಪಿಸಿದರು. ನಂತರ ಉದಯ ಕುಮಾರ್ ಶೆಟ್ಟಿ ಮುನಿಯಾಲು ಧ್ವಜರೋಹಣ ಮೂಲಕ ಮಹೋತ್ಸವಕ್ಕೆ ಚಾಲನೆ ನೀಡಿದರು.ದಿನದ ಪ್ರಮುಖ ಸಾಂಭ್ರಮಿಕ ಬಲಿಪೂಜೆಯನ್ನು ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ಡೊ. ಅಲೋಶಿಯಸ್ ಪಾವ್ ಡಿ ಸೋಜ ನೆರವೇರಿಸಿ ಪ್ರಬೋಧನೆ ನೀಡಿದರು. ದೇವರ ವಾಕ್ಯದ ಭಾನುವಾರದ ಪ್ರಯುಕ್ತ ವಿಶೇಷ ಪ್ರಭೋದನೆ ನೀಡಿದ ಅವರು, ದೇವರ ವಾಕ್ಯವನ್ನು ಆಲಿಸಿ, ಅದನ್ನು ಧ್ಯಾನಿಸಿ, ಜೀವನದಲ್ಲಿ ಪಾಲಿಸಿದಾಗ ಸದ್ಗುಣಗಳ ಫಲವನ್ನು ನೀಡಲು ಸಾಧ್ಯ. ಈ ಮುಖಾಂತರ ನಾವೆಲ್ಲರೂ ದೇವರ ಪ್ರೀತಿಯ ಮಕ್ಕಳಾಗುತ್ತೇವೆ ಎಂದು ನುಡಿದರು.ದಿನದ ಇತರ ಬಲಿಪೂಜೆಗಳನ್ನು ವಂ. ವಿನ್ಸೆಂಟ್ ಸೀಕ್ವೆರಾ, ಬಜೋಡಿ, ವಂ.ನವೀನ್ ಪಿಂಟೊ, ಮಂಗಳೂರು, ವಂ. ಮೊನ್ಸಿಜೊರ್ ಪೊರ್ಡಿನಾಡ್ ಗೊನ್ಸಾಲ್ವಿಸ್, ಶ್ರೇಷ್ಠ ಧರ್ಮಗುರುಗಳು ಉಡುಪಿ ಧರ್ಮಕ್ಷೇತ್ರ, ವಂ.ರಾಜೇಶ್ ರೊಜಾರಿಯೊ, ಮಂಗಳೂರು ವಂ. ಡೊ. ರೊಕ್ ಡಿಸೋಜ, ಸಂತೆಕಟ್ಟೆ, ವಂದನೀಯ ಬೊನಿಫಾಸ್ ಪಿಂಟೊ, ಮೂಡುಬೆಳ್ಳೆ, ವಂ. ಚೇತನ್ ಲೋಬೊ, ಬಿಜೈ ನೆರವೇರಿಸಿದರು.ದಿನದ ಅಂತಿಮ ಬಲಿಪೂಜೆಯನ್ನು ರಾತ್ರಿ 8 ಗಂಟೆಗೆ ನೆರವೇರಿಸಿ ಮಹೋತ್ಸವದ ಪ್ರಥಮ ದಿನದ ಧಾರ್ಮಿಕ ಕಾರ್ಯಕ್ರಮಗಳನ್ನು ಸಂಪನ್ನಗೊಳಿಸಲಾಯಿತು.