ಅತ್ತೂರು ದೇವಳದಲ್ಲಿ ಮಾ. 7ರಿಂದ ವಿವಿಧ ಪೂಜೆ

| Published : Feb 25 2024, 01:52 AM IST

ಸಾರಾಂಶ

ಅತ್ತೂರು ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಾರ್ಚ್ ತಿಂಗಳ 7ರಿಂದ 9 ರವರಗೆ ವಿವಿಧ ಪೂಜಾಕಾರ್ಯಗಳು ನಡೆಯಲಿದೆ.

ಕನ್ನಡಪ್ರಭ ವಾರ್ತೆ ಗುಡ್ಡೆಹೊಸುರು

ಇಲ್ಲಿಗೆ ಸಮೀಪದ ಅತ್ತೂರು ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಾರ್ಚ್ ತಿಂಗಳ 7ರಿಂದ 9 ರವರಗೆ ದೇವಸ್ಥಾನದಲ್ಲಿ ವಿವಿಧ ಪೂಜಾಕಾರ್ಯಗಳು ನಡೆಯಲಿದೆ.

7ರಂದು ತಕ್ಕರ ಮನೆಯಿಂದ ಭಂಡಾರ ಶ್ರೀ ಕ್ಷೇತ್ರಕ್ಕೆ ಆಗಮನ, ರಾತ್ರಿ 8 ಗಂಟೆಗೆ ದೇವರಿಗೆ ಮಹಾಪೂಜೆ ನಂತರ ಪ್ರಸಾದ ವಿತರಣೆ. 8ರಂದು ಮುಂಜಾನೆ 6.30 ಕ್ಕೆ ಗಣಪತಿ ಹೋಮ, ನಂತರ ನವಕ ಕಳಶಾಭಿಷೇಕ ಶ್ರೀ ದೇವರ ಪೂಜೆ, ನಂತರ ಶ್ರೀ ದೇವರ ಬಲಿ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6 ಗಂಟೆಯಿಂದ ದೀಪಾರಾಧನೆ ನಡೆಯಲಿದೆ. ರಾತ್ರಿ 11 ಗಂಟೆಯಿಂದ ಶ್ರೀ ದೇವರ ಶ್ರೀ ಭೂತಬಲಿ ಮತ್ತು ಮೆರವಣಿಗೆ ಮೂಲಕ ಅಲ್ಲಿನ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಶ್ರೀ ದೇವರ ಭೇಟಿ ನಡೆಯಲಿದೆ. 8ರ ರಾತ್ರಿ 7 ಗಂಟೆಯಿಂದ ದೇವಸ್ಥಾನ ಆವರಣದಲ್ಲಿ ಯಕ್ಷಗಾನ ನಡೆಯಲಿದೆ. ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಶಿವಪಂಚಾಕ್ಷರಿ ಮಹಿಮೆ ಮತ್ತು ದೇವಿ ಮಹಾತ್ಮೆ ಎಂಬ ಯಕ್ಷಗಾನ ಪ್ರಸಂಗ ನಡೆಯಲಿದೆ. 9ರಂದು ಬೆಳಗ್ಗಿನಿಂದಲೇ ವಿವಿಧ ಪೂಜಾಕಾರ್ಯಗಳು ನಡೆಯಲಿದೆ. ಈ ಮೂರು ದಿನಗಳ ಕಾಲ ದೇವಸ್ಥಾನದಲ್ಲಿ ಅನ್ನಸಂತರ್ಪಣೆ ನಡೆಯಲಿದೆ.

ಮಹಾಶಿವರಾತ್ರಿ ಉತ್ಸವ: ಫೆ. 26ರಂದು ಶ್ರೀ ಪಂಚಲಿಂಗೇಶ್ವರ ದೇವರ ಮಹಾಶಿವರಾತ್ರಿ ಉತ್ಸವಕ್ಕೆ ಕಟ್ಟು ಬೀಳಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ಉಗ್ರಾಣಿ ಮನೋಜ್ ಮತ್ತು ಕಾರ್ಯದರ್ಶಿ ಬಿ.ಎಂ.ರಮೇಶ್ ತಿಳಿಸಿದ್ದಾರೆ.