ಸಾರಾಂಶ
ಆಳ್ವಾಸ್ (ಸ್ವಾಯತ್ತ) ಕಾಲೇಜಿನ ದೃಶ್ಯ-ಶ್ರವ್ಯ ಸಭಾಂಗಣದಲ್ಲಿ ಸೋಮವಾರ ಇಂಗ್ಲಿಷ್ ಸ್ನಾತಕೋತ್ತರ ವಿಭಾಗ, ಕನ್ನಡ ಪದವಿ ವಿಭಾಗ, ಆಳ್ವಾಸ್ ಸಿನಿಮಾ ಸಮಾಜ ಹಾಗೂ ಹೆಗ್ಗೋಡು ನೀನಾಸಂ ಪ್ರತಿಷ್ಠಾನದ ಸಹಯೋಗದಲ್ಲಿ ‘ಸಿನಿಮಾ ರಸಗ್ರಹಣ-ಎರಡು ದಿನಗಳ ಕಾರ್ಯಾಗಾರ’ ನಡೆಯಿತು.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಗಾಳಿ, ನೀರು, ಅಗ್ನಿಯಷ್ಟೇ ದೃಶ್ಯ-ಶ್ರವ್ಯ ಮಾಧ್ಯಮವೂ ಬದುಕಿನ ಅವಿಭಾಜ್ಯ ಅಂಗವಾಗಿದೆ ಎಂದು ನಿವೃತ್ತ ಸಹ ಪ್ರಾಧ್ಯಾಪಕ ಜಯವಂತ ಜಾಧವ್ ಹೇಳಿದರು.ಆಳ್ವಾಸ್ (ಸ್ವಾಯತ್ತ) ಕಾಲೇಜಿನ ದೃಶ್ಯ-ಶ್ರವ್ಯ ಸಭಾಂಗಣದಲ್ಲಿ ಸೋಮವಾರ ಇಂಗ್ಲಿಷ್ ಸ್ನಾತಕೋತ್ತರ ವಿಭಾಗ, ಕನ್ನಡ ಪದವಿ ವಿಭಾಗ, ಆಳ್ವಾಸ್ ಸಿನಿಮಾ ಸಮಾಜ ಹಾಗೂ ಹೆಗ್ಗೋಡು ನೀನಾಸಂ ಪ್ರತಿಷ್ಠಾನದ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ‘ಸಿನಿಮಾ ರಸಗ್ರಹಣ-ಎರಡು ದಿನಗಳ ಕಾರ್ಯಾಗಾರ’ದಲ್ಲಿ ಅವರು ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಮಾತನಾಡಿ, ಸಿನಿಮಾ ಸಮಾಜದ ಪ್ರತಿಬಿಂಬ. ಕೆಲವೊಮ್ಮೆ ಸಮಾಜವೂ ಸಿನಿಮಾದ ಪ್ರತಿಬಿಂಬ ಆಗಬಹುದು. ಆದರೆ, ಸಿನಿಮಾದ ಉದ್ದೇಶ ಕೇವಲ ಹಣ ಮತ್ತು ಮಾರುಕಟ್ಟೆ ಮಾತ್ರವಲ್ಲ, ಸಮಾಜ ನಿರ್ಮಾಣದ ಸದುದ್ದೇಶವನ್ನೂ ಹೊಂದಿದೆ ಎಂದರು.
ಕಾರ್ಯಕ್ರಮದ ಸಂಯೋಜಕ, ಕಾಲೇಜಿನ ಕುಲಸಚಿವ (ಅಕಾಡೆಮಿಕ್ಸ್) ಡಾ.ಟಿ.ಕೆ. ರವೀಂದ್ರನ್ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಪದವಿ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಯೋಗೀಶ್ ಕೈರೋಡಿ, ಆಳ್ವಾಸ್ ಫಿಲಂ ಸೊಸೈಟಿ ಸಂಯೋಜಕ ಹರ್ಷವರ್ಧನ ಪಿ.ಆರ್., ಇಂಗ್ಲಿಷ್ ವಿಭಾಗದ ಜ್ಯೂಲಿಯಾನ ಇದ್ದರು. ಪವಿತ್ರ ತೇಜ್ ನಿರೂಪಿಸಿದರು. ಏಂಜಲ್ ಶೈನಾ ಸ್ವಾಗತಿಸಿದರು. ಜೀವಿತ ವಂದಿಸಿದರು.