ಮಣಿಪಾಲ ಆರೋಗ್ಯ ಕಾರ್ಡ್-2026ರ ನೋಂದಣಿಗೆ ಆ.31 ಕೊನೆಯ ದಿನವಾಗಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮಣಿಪಾಲ ಕಸ್ತೂರ್ಬ ಆಸ್ಪತ್ರೆಯ ಮಾರ್ಕೆಟಿಂಗ್ ವಿಭಾಗದ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು.
ಕಾರ್ಕಳ: ಮಣಿಪಾಲ ಆರೋಗ್ಯ ಕಾರ್ಡ್-2026ರ ನೋಂದಣಿಗೆ ಆ.31 ಕೊನೆಯ ದಿನವಾಗಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮಣಿಪಾಲ ಕಸ್ತೂರ್ಬ ಆಸ್ಪತ್ರೆಯ ಮಾರ್ಕೆಟಿಂಗ್ ವಿಭಾಗದ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು.
ಕಾರ್ಕಳದಲ್ಲಿ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ವಿತರಿಸಿ ಮಾತನಾಡಿದರು.ಮಾಹೆ ಸಮೂಹ ಆಸ್ಪತ್ರೆಗಳಲ್ಲಿ ವಿವಿಧ ಆರೋಗ್ಯ ಸೇವೆಗಳಿಗೆ ರಿಯಾಯಿತಿ ಒದಗಿಸುವ ಈ ಕಾರ್ಡ್ ನೋಂದಣಿಯ ನಂತರ ತಿಂಗಳ 15ನೇ ತಾರೀಖಿನಿಂದ ಜಾರಿಗೆ ಬರಲಿದ್ದು, 2027ರ ಆ.15ರವರೆಗೆ ಮಾನ್ಯವಾಗಿರುತ್ತದೆ. ವೈಯಕ್ತಿಕ ಸದಸ್ಯತ್ವಕ್ಕೆ ವಾರ್ಷಿಕ 350 ರು., ಕೌಟುಂಬಿಕ ಸದಸ್ಯತ್ವಕ್ಕೆ 700 ರು. ಹಾಗೂ ಕೌಟುಂಬಿಕ ಪ್ಲಸ್ ಸದಸ್ಯತ್ವಕ್ಕೆ 900 ರು. ಶುಲ್ಕ ನಿಗದಿಪಡಿಸಲಾಗಿದೆ.ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ತಜ್ಞ ವೈದ್ಯರ ಸಮಾಲೋಚನಾ ಶುಲ್ಕದಲ್ಲಿ ಶೇ. 50, ಪ್ರಯೋಗಾಲಯ ಪರೀಕ್ಷೆಗಳಲ್ಲಿ ಶೇ. 25 ಹಾಗೂ ರೇಡಿಯಾಲಜಿ ಸೇವೆಗಳಲ್ಲಿ ಶೇ. 20ರಷ್ಟು ರಿಯಾಯಿತಿ ಸೇರಿದಂತೆ ಹಲವು ಸೌಲಭ್ಯಗಳನ್ನು ಕಾರ್ಡ್ ಸದಸ್ಯರು ಪಡೆಯಬಹುದಾಗಿದೆ. ಮಣಿಪಾಲ, ಉಡುಪಿ, ಕಾರ್ಕಳ, ಮಂಗಳೂರು, ಅತ್ತಾವರ ಹಾಗೂ ಕಟೀಲು ಸೇರಿದಂತೆ ಮಾಹೆ ಸಮೂಹ ಆಸ್ಪತ್ರೆಗಳು, ಮಣಿಪಾಲ ದಂತ ಮತ್ತು ಆಯುರ್ವೇದ ಆಸ್ಪತ್ರೆಗಳಲ್ಲೂ ಕಾರ್ಡ್‌ನ ಪ್ರಯೋಜನ ಪಡೆಯಬಹುದು.
ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ವ್ಯವಸ್ಥಾಪಕ ನಟೇಶ್ ಮಾತನಾಡಿ, ಕಾರ್ಕಳದ ರೋಟರಿ ಆಸ್ಪತ್ರೆ 24 ಗಂಟೆಗಳ ಕಾಲ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾರ್ಕೆಟಿಂಗ್ ವಿಭಾಗದ ಸಚಿನ್ ಕಾರಂತ್, ಆಶ್ಲೋನ್, ಅನಿಲ್ ಮತ್ತಿತರರಿದ್ದರು.