ಕಾರ್ಯಕ್ರಮದಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು. ಮಕ್ಕಳಿಗಾಗಿ ಉಚಿತವಾಗಿ ಬಿಸ್ಕತ್, ಚಾಕ್ಲೆಟ್, ಐಸ್‌ಕ್ರೀಂ

ಕನ್ನಡಪ್ರಭ ವಾರ್ತೆ ಮೈಸೂರು

ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಉಪ ಸಮಿತಿಯು ಗುರುವಾರ ಮಕ್ಕಳ ದಿನಾಚರಣೆ ಆಯೋಜಿಸಿತ್ತು.

ಪ್ರಾಧಿಕಾರದ ಅಧ್ಯಕ್ಷ ಅಯೂಬ್‌ಖಾನ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು. ಮಕ್ಕಳಿಗಾಗಿ ಉಚಿತವಾಗಿ ಬಿಸ್ಕತ್, ಚಾಕ್ಲೆಟ್, ಐಸ್‌ಕ್ರೀಂ, ಕಡಲೇಕಾಯಿ, ಕಿತ್ತಳೆಹಣ್ಣು, ಮಜ್ಜಿಗೆ, ಸೌತೆಕಾಯಿ, ಶುದ್ಧ ಕುಡಿಯುವ ನೀರು, ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು. ಮಕ್ಕಳಿಗಾಗಿ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಿದ್ದು, ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಜಿಪಂ ಸಿಇಒ ಕೆ.ಎಂ. ಗಾಯತ್ರಿ, ಪ್ರಾಧಿಕಾರದ ಸಿಇಒ ಕೆ. ರುದ್ರೇಶ್‌, ನಗರ ಕಾಂಗ್ರೆಸ್‌ಅಧ್ಯಕ್ಷ ಆರ್‌. ಮೂರ್ತಿ, ಜಿಲ್ಲಾ ಕಾಂಗ್ರೆಸ್‌ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ಶಾರದಾ ಸಂಪತ್‌, ಗಿರೀಶ್‌, ಎಚ್‌.ಎಸ್‌. ಗಿರಿಜಾಂಬ, ರಾಜೇಶ್ವರಿ, ನಗರ ಪಾಲಿಕೆ ಮಾಜಿ ಸದಸ್ಯ ಫೈರೋಜ್‌ಖಾನ್‌, ಸಾಂಸ್ಕೃತಿಕ ಉಪ ಸಮಿತಿ ಅಧ್ಯಕ್ಷ ರಘುರಾಜೇ ಅರಸ್‌ಮೊದಲಾದವರು ಇದ್ದರು.