ಆಟೋ ಚಾಲಕರಿಂದ ಅಪ್ಪು ಪುಣ್ಯಸ್ಮರಣೆ

| Published : Oct 31 2024, 12:48 AM IST

ಸಾರಾಂಶ

ಜನನವಾದ ಮೇಲೆ ಮರಣ ನಿಶ್ಚಿತ. ಮರಣಿಸಿದ ನಂತರವೂ ಜನರ ಮನಸ್ಸಿನಲ್ಲಿ ಜೀವಂತವಾಗಿರುವಂತೆ ಬದುಕಬೇಕು. ಅಂಥ ಬದುಕು ಚಿತ್ರ ನಟ ಪುನೀತ್ ರಾಜ್‌ಕುಮಾರ್‌ ಅವರದ್ದಾಗಿತ್ತು ಎಂದು ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಗೋಕಾಕ್‌ ಪುಟ್ಟಣ್ಣ ಹೇಳಿದರು. ಹಳೇ ಬಸ್ ನಿಲ್ದಾಣದ ಹತ್ತಿರ ಇರುವ ಶ್ರೀ ವಿನಾಯಕ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಚಿತ್ರ ನಟ ಪವರ್‌ ಸ್ಟಾರ್‌ ಪುನೀತ್ ರಾಜಕುಮಾರ್‌ರವರ ಮೂರನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಜರುಗಿತು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಪಟ್ಟಣದ ಹಳೇ ಬಸ್ ನಿಲ್ದಾಣದ ಹತ್ತಿರ ಇರುವ ಶ್ರೀ ವಿನಾಯಕ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಚಿತ್ರ ನಟ ಪವರ್‌ ಸ್ಟಾರ್‌ ಪುನೀತ್ ರಾಜಕುಮಾರ್‌ರವರ ಮೂರನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಜರುಗಿತು.

ಈ ವೇಳೆ ಮಾತನಾಡಿದ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಗೋಕಾಕ್‌ ಪುಟ್ಟಣ್ಣ ಜನನವಾದ ಮೇಲೆ ಮರಣ ನಿಶ್ಚಿತ. ಮರಣಿಸಿದ ನಂತರವೂ ಜನರ ಮನಸ್ಸಿನಲ್ಲಿ ಜೀವಂತವಾಗಿರುವಂತೆ ಬದುಕಬೇಕು. ಅಂಥ ಬದುಕು ಚಿತ್ರ ನಟ ಪುನೀತ್ ರಾಜ್‌ಕುಮಾರ್‌ ಅವರದ್ದಾಗಿತ್ತು ಎಂದು ಹೇಳಿದರು.

ಶ್ರೀಮಂತಿಕೆ, ಜೀವಿತಾವಧಿ ಮುಖ್ಯವಲ್ಲ, ಹೇಗೆ ಬದುಕಿದ್ದರು ಎಂಬುದೇ ಮುಖ್ಯ, ಸಂತ ಕಬೀರರು ಹೇಳಿದಂತೆ ನಾವು ಮರಣಿಸಿದಾಗ ಜನರಿಗೆ ದುಃಖವಾದರೆ, ಬದುಕಿಗೆ ಸಾರ್ಥಕ ಬದುಕಾಗುತ್ತದೆ. ಕೇವಲ ೪೬ ವರ್ಷ ಬದುಕಿದರೂ ಪುನೀತ್ ರಾಜ್‌ಕುಮಾರ್‌ ಸಾವಿರಾರು ಜನರಿಗೆ ಆಸರೆಯಾಗಿದ್ದರು. ಅನೇಕ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಧನ ಸಹಾಯ ಮಾಡಿದ್ದರು. ಪ್ರಚಾರ ಬಯಸದೆ ಕರ್ಣನ ರೀತಿಯಲ್ಲಿ ಕೊಡುಗೈ ದಾನಿಯಾಗಿದ್ದರು. ಸಂಬಂಧವಿಲ್ಲದವರು ಕೂಡ ಅವರ ಸಾವಿಗೆ ದುಃಖಪಟ್ಟಿದ್ದಾರೆ. ಶಾರೀರಿಕವಾಗಿ ನಮ್ಮನ್ನಗಲಿದರೂ ಅವರಿಗೆ ಸಾವಿಲ್ಲ, ಅವರು ಅಜರಾಮರ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಲಿಮ್ಕಾ ದಾಖಲೆ ಪುರಸ್ಕೃತ ಶರವಣಕುಟ್ಟಿ, ಆಟೋ ಸಂಘದ ಅಧ್ಯಕ್ಷ ಸಿ. ಕೆ. ಕುಮಾರ್‌, ಕಾರ್ಯದರ್ಶಿ ರಮೇಶ್, ರುದ್ರೇಶ್, ತೀರ್ಥಪ್ರಸಾದ್, ಪುನೀತ್, ಸಾಮಾಜಿಕ ಕಾರ್ಯಕರ್ತ ಎಂ. ಎನ್. ಶಾಂತರಾಜ್, ಡಾ.ರಾಜ್‌ಕುಮಾರ್ ಸಂಘದ ಮಹೇಶ್, ದಿನೇಶ್ ಮತ್ತಿತರಿದ್ದರು.