ಆಟೋವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು, ಪರಿಣಾಮ 6 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಸರಗೂರು ಸಮೀಪದಲ್ಲಿ ಜರುಗಿದೆ.
ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲು
---ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ
ಆಟೋವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು, ಪರಿಣಾಮ 6 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಸರಗೂರು ಸಮೀಪದಲ್ಲಿ ಜರುಗಿದೆ.ಸತ್ತೇಗಾಲ ಗ್ರಾಮದ ಪುಟ್ಟಮ್ಮ(60), ಮನೀಶ್(14), ಲಕ್ಷ್ಮಮ್ಮ(58), ಚಾಲಕ ಮಧು (55), ಕೊಳ್ಳೇಗಾಲದ ಮಂಜುಳಾ (35) ಹಾಗೂ ಮತ್ತೀಪುರ ಗ್ರಾಮದ ಮಹದೇವಮ್ಮ (70) ಎಂಬುವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಹೆಚ್ಚಿನ ಅಪಾಯದಿಂದ ಪಾರಾದವರು.ಸತ್ತೇಗಾಲ ಕಡೆಯಿಂದ ಕೊಳ್ಳೇಗಾಲಕ್ಕೆ ಪ್ರಯಾಣಿಕರನ್ನು ತುಂಬಿಕೊಂಡು ಬರುತ್ತಿದ್ದ ಪ್ಯಾಸೆಂಜರ್ ಆಟೋ, ಸರಗೂರು ಸಮೀಪದ ರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಪರಿಣಾಮ ಪಲ್ಟಿಯಾಗಿದೆ. ಆಟೋ ಪಲ್ಟಿಯಾಗುತ್ತಿದ್ದಂತೆ ತಕ್ಷಣ ಗಾಯಾಳುಗಳನ್ನು ಕೊಳ್ಳೇಗಾಲ ಆಸ್ಪತ್ರೆಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಾಗಿದೆ.