ಸಾರಾಂಶ
ಕಾಳಿಕಾಂಬಾ ದೇವಸ್ಥಾನದಿಂದ ಹೊರಟ ಅವಭೃತ ಮೆರವಣಿಗೆಯು ಮುಖ್ಯ ರಸ್ತೆಯ ಮೂಲಕ ಸಾಗಿ ವೆಂಕಟರಮಣ ದೇವಸ್ಥಾನದ ಶ್ರೀ ಸುಧೀಂದ್ರ ಸರೋವರದಲ್ಲಿ ಅವಭೃತ ನಡೆಯಿತು.
ಮೂಡುಬಿದಿರೆ: ಇಲ್ಲಿನ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ಐದು ದಿನಗಳ ಕಾಲ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವರ್ಷಾವಧಿ ಮಹೋತ್ಸವ ನಡೆದಿದ್ದು ಬುಧವಾರ ನಡೆದ ಅವಭೃತ ಮೆರವಣಿಗೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದು ಬಣ್ಣದೋಕುಳಿಯಲ್ಲಿ ಮಿಂದೆದ್ದರು.
ಕಾಳಿಕಾಂಬಾ ದೇವಸ್ಥಾನದಿಂದ ಹೊರಟ ಅವಭೃತ ಮೆರವಣಿಗೆಯು ಮುಖ್ಯ ರಸ್ತೆಯ ಮೂಲಕ ಸಾಗಿ ವೆಂಕಟರಮಣ ದೇವಸ್ಥಾನದ ಶ್ರೀ ಸುಧೀಂದ್ರ ಸರೋವರದಲ್ಲಿ ಅವಭೃತ ನಡೆಯಿತು.ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕಾಳಿಕಾಂಬಾ ಮಹಿಳಾ ಸಮಿತಿಯಿಂದ ಸಾಂಸ್ಕೃತಿಕ ವೈವಿಧ್ಯ, ಕಾಳಿಕಾಂಬಾ ಸೇವಾ ಸಮಿತಿ ಸಂಯೋಜನೆಯಲ್ಲಿ ಶಿವದೂತೆ ಗುಳಿಗೆ ನಾಟಕ, ಹನುಮಗಿರಿ ಕೋದಂಡರಾಮ ಕೃಪಪೋಷಿತ ಯಕ್ಷಗಾನ ಮಂಡಳಿಯಿಂದ ಯಕ್ಷಗಾನ ಬಯಲಾಟ ಶುಕ್ರನಂದನೆ, ಡಾ.ಎಸ್.ಪಿ ಗುರುದಾಸ್ ಇವರಿಂದ ಹರಿಕಥಾ ಕಾಲಕ್ಷೇಪ, ಕಾಳಿಕಾಂಬಾ ಭಜನಾ ಮಂಡಳಿಯಿಂದ ಭಕ್ತಿ ಸಂಗೀತ ಕಾರ್ಯಕ್ರಮಗಳು ನಡೆಯಿತು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ ಎಂ, ಮಾಜಿ ಸಚಿವ ಅಭಯಚಂದ್ರ ಜೈನ್ ಸತ ಗಣ್ಯರು ಭಾಗವಹಿಸಿದರು.