ನಾನು ಇಲ್ಲಿ ಕರ್ತವ್ಯ ನಿರ್ವಹಿಸಿದ 30ತಿಂಗಳಿಗೂ ಅಧಿಕ ಅವಧಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉತ್ತಮ ಸಹಕಾರ ನೀಡಿದ್ದಾರೆ. ಈ ವೇಳೆ ಹಲವಾರು ಪ್ರಕರಣಗಳನ್ನು ಪತ್ತೆ ಹಚ್ಚಿ ಪ್ರಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ತೖಪ್ತಿ ನನಗಿದೆ .

ಕನ್ನಡಪ್ರಭ ವಾರ್ತೆ, ಕೊಳ್ಳೇಗಾಲ

ಕೊಳ್ಳೇಗಾಲ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ನೂತನ ಉಪ ನಿರೀಕ್ಷಕರಾಗಿ ಅವಿನಾಶ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

ಕಳೆದ 3 ವರುಷಗಳಿಂದಲೂ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ವಿಜಯರಾಜ್ ಅವರಿಗೆ ಮೈಸೂರಿಗೆ ವರ್ಗಾವಣೆಯಾದ ಹಿನ್ನೆಲೆ ಕೊಳ್ಳೇಗಾಲ ಸಿಐಡಿ ಅರಣ್ಯ ಸಂಚಾರಿದಳದ ನೂತನ ಪಿಎಸ್‌ಐ ಅವಿನಾಶ್ ಅವರು ನಿರ್ಗಮಿತ ವಿಜಯರಾಜ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಈ ವೇಳೆ ವಿಜಯರಾಜ್ ಮಾತನಾಡಿ, ನಾನು ಇಲ್ಲಿ ಕರ್ತವ್ಯ ನಿರ್ವಹಿಸಿದ 30ತಿಂಗಳಿಗೂ ಅಧಿಕ ಅವಧಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉತ್ತಮ ಸಹಕಾರ ನೀಡಿದ್ದಾರೆ. ಈ ವೇಳೆ ಹಲವಾರು ಪ್ರಕರಣಗಳನ್ನು ಪತ್ತೆ ಹಚ್ಚಿ ಪ್ರಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ತೖಪ್ತಿ ನನಗಿದೆ ಎಂದರು.ಎಎಸ್‌ಐ ತಖೀವುಲ್ಲಾ, ಮುಖ್ಯ ಪೇದೆಗಳಾದ ರಾಮಚಂದ್ರ, ಸ್ವಾಮಿ, ಲತಾ ಇನ್ನಿತರಿದ್ದರು.