ರಸ್ತೆ ಸಂಚಾರಿ ನಿಯಮಗಳನ್ನು ಪಾಲಿಸಿ ಅಪಘಾತ ತಪ್ಪಿಸಿ: ಸಪ್ತಾಶ್ರೀ

| Published : Feb 18 2024, 01:31 AM IST

ರಸ್ತೆ ಸಂಚಾರಿ ನಿಯಮಗಳನ್ನು ಪಾಲಿಸಿ ಅಪಘಾತ ತಪ್ಪಿಸಿ: ಸಪ್ತಾಶ್ರೀ
Share this Article
  • FB
  • TW
  • Linkdin
  • Email

ಸಾರಾಂಶ

ವಾಹನ ಚಾಲನೆ ಮಾಡುವಾಗ ರಸ್ತೆ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದ್ದು ಅತಿವೇಗದ ಚಾಲನೆ ಅಪಾಯಕ್ಕೆ ಕಾರಣವಾಗಲಿದೆ. ಆದ್ದರಿಂದ ರಸ್ತೆ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕೆಂದು ಉಪವಿಭಾಗಾಧಿಕಾರಿ ಸಪ್ತಾಶ್ರೀ ತಿಳಿಸಿದರು.

ಕನ್ನಡಪ್ರಭ ವಾರ್ತೆ ತಿಪಟೂರು

ವಾಹನ ಚಾಲನೆ ಮಾಡುವಾಗ ರಸ್ತೆ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದ್ದು ಅತಿವೇಗದ ಚಾಲನೆ ಅಪಾಯಕ್ಕೆ ಕಾರಣವಾಗಲಿದೆ. ಆದ್ದರಿಂದ ರಸ್ತೆ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕೆಂದು ಉಪವಿಭಾಗಾಧಿಕಾರಿ ಸಪ್ತಾಶ್ರೀ ತಿಳಿಸಿದರು.

ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಗುರುವಾರ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ನಡೆದ 35ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಾಹನ ಸವಾರರು ಎಚ್ಚರಿಕೆ ಹಾಗೂ ಜಾಗರೂಕತೆಯಿಂದ ವಾಹನವನ್ನು ಚಲಾಯಿಸಬೇಕಾಗಿದ್ದು, ಅಡ್ಡಾದಿಡ್ಡಿ ವಾಹನ ಚಾಲನೆ ಮಾಡುವುದರಿಂದ ಅಪಘಾತ ಕಟ್ಟಿಟ್ಟ ಬುತ್ತಿಯಾಗಿದ್ದು ವಿದ್ಯಾರ್ಥಿಗಳು ರಸ್ತೆ ಸಾರಿಗೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿದರೆ ಅನಾಹುತಗಳನ್ನು ತಪ್ಪಿಸಬಹುದು ಎಂದರು.

ತಹಸೀಲ್ದಾರ್ ಪವನ್‌ಕುಮಾರ್‌ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ವೀಲಿಂಗ್ ಮಾಡುವುದು, ದ್ವಿಚಕ್ರ ವಾಹನದಲ್ಲಿ ಮೂರ‍್ನಾಲ್ಕು ಜನರು ಸವಾರಿ ಮಾಡುವುದು ಕಾನೂನು ಬಾಹಿರವಾಗಿದ್ದು ಇಂತಹವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕೆಂದರು.

ಸಹಾಯಕ ಸಾರಿಗೆ ಅಧಿಕಾರಿ ಸುಧಾಮಣಿ, ಪ್ರಾಂಶುಪಾಲ ಎಂ.ಡಿ. ಶಿವಕುಮಾರ್ ಮಾತನಾಡಿದರು. ಈ ಸಂದರ್ಭದಲ್ಲಿ ಸಾರಿಗೆ ಇಲಾಖೆ ಆವರಣದಿಂದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನವರೆಗೂ ವಿದ್ಯಾರ್ಥಿಗಳು ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಕಸಾಪ ತಾ. ಅಧ್ಯಕ್ಷ ಬಸವರಾಜಪ್ಪ, ಕುಮಾರ್‌ ಆಸ್ಪತ್ರೆಯ ಡಾ. ಶ್ರೀಧರ್‌, ಸಾರಿಗೆ ಇಲಾಖೆ ಸಿಬ್ಬಂದಿ ಚೇತನ್, ಗುರುರಾಜ್ ಸೇರಿದಂತೆ ಡ್ರೈವಿಂಗ್ ಶಾಲೆಗಳ ಸಿಬ್ಬಂದಿಗಳು ಭಾಗವಹಿಸಿದ್ದರು.