ಸಾರಾಂಶ
ಹನೂರು ಸರ್ಕಾರಿ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಬಳಕೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ನಡೆಯಿತು.
ಕನ್ನಡಪ್ರಭ ವಾರ್ತೆ ಹನೂರು
ಜನರು ಮಾದಕ ವಸ್ತಗಳನ್ನು ಬಳಕೆ ಮಾಡಿ ತಾವೇ ಕಾಯಿಲೆಯನ್ನು ತಂದೊಡ್ಡಿಕೊಳ್ಳುತ್ತಿದ್ದಾರೆ ಮಾದಕ ವಸ್ತುಗಳನ್ನು ತ್ಯೆಜಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ ಎಂದು ಟಿಎಚ್ಒ ಡಾ.ಪ್ರಕಾಶ್ ತಿಳಿಸಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಬಳಕೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ವ್ಯಸನ ಎನ್ನುವುದು ಒಂದು ಸಂಕೀರ್ಣವಾದ ಸಮಸ್ಯೆಯಾಗಿದ್ದು, ತಾತ್ಕಾಲಿಕವಾಗಿ ಆನಂದ ನೀಡುವ ಮಾದಕ ದ್ರವ್ಯ ವಸ್ತುಗಳ ಅವಲಂಬನೆಗೆ ಒಳಗಾಗುವುದನ್ನು ಹೆಚ್ಚಾಗಿ ಸಮಾಜದಲ್ಲಿ ಕಾಣುತ್ತಿದ್ದೇವೆ. ಸ್ನೇಹಿತರ ಒತ್ತಾಯ, ದೈಹಿಕ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಲು ಹೀಗೆ ಅನೇಕ ಕಾರಣಗಳಿಗಾಗಿ ಜನರು ಮಾದಕ ವ್ಯಸನಿಗಳಿಗೆ ದಾಸರಾಗಿದ್ದಾರೆ. ಇಂತಹ ಹವ್ಯಾಸ ಬಿಟ್ಟು ಹೊರಬರಲಾರದ ಸ್ಥಿತಿಯಲ್ಲಿ ಬಳಲುತ್ತಿದ್ದಾರೆ ಸರ್ವೆ ಪ್ರಕಾರ ಮದ್ಯವಸನಕ್ಕೆ ಒಳಗಾಗಿ ವಾಹನ ಚಲಾಯಿಸಿದವರಲ್ಲಿ ಶೇ 30ರಷ್ಟು ಅಪಘಾತಗಳು ನಡೆದಿದ್ದರೆ, ಅದರಲ್ಲಿ ಶೇ 4೦ರಷ್ಟು ಮಂದಿ ಸಾವನ್ನಪ್ಪಿದ್ದಾರೆ. ಹಾಗಾಗಿ ಮಾದಕ ವಸ್ತಗಳನ್ನು ದೂರವಿಟ್ಟು, ಚಟಕ್ಕೆ ಒಳಗಾಗಿರುವ ಜನರನ್ನು ಹೊರತರಲು ಸರ್ಕಾರ ರೂಪಿಸಿರುವ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿದ್ದು, ಸಂಘ ಸಂಸ್ಥೆಗಳು ಈ ಕಾರ್ಯಕ್ಕೆ ಕೈಜೋಡಿಬೇಕೆಂದರು.ಈ ವೇಳೆ ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ನಿಂಬೇಸ್, ಪ್ರಶಾಂತ್ , ಮುನಿಸ್ವಾಮಿ, ಪಾರ್ವರಿ ಜನಿತಾಮೇರಿ ಮತ್ತಿತರರಿದ್ದರು.