ಮೂಡ್ಲುಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿನ ಎಂ.ಬಿ.ಎ. ವಿಭಾಗದ ವತಿಯಿಂದ ಇತ್ತೀಚೆಗೆ ‘ಅವೇಕೆನ್ ದಿ ಸೂಪರ್ ಹೀರೋ ಇನ್ ಯು’ ಬಗ್ಗೆ ಕಾರ್ಯಾಗಾರ ನಡೆಯಿತು.
ಕುಂದಾಪುರ: ಇಲ್ಲಿನ ಮೂಡ್ಲುಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿನ ಎಂ.ಬಿ.ಎ. ವಿಭಾಗದ ವತಿಯಿಂದ ಇತ್ತೀಚೆಗೆ ‘ಅವೇಕೆನ್ ದಿ ಸೂಪರ್ ಹೀರೋ ಇನ್ ಯು’ ಬಗ್ಗೆ ಕಾರ್ಯಾಗಾರ ನಡೆಯಿತು.
ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಸೇಲ್ಸ್ ಸ್ಟ್ರೈಟೆಜಿಕ್ ಕನ್ಸಲ್ಟೆಂಟ್ ಅಂಡ್ ಮೆಂಟರ್ ಟು ಸ್ಟಾರ್ಟ್ ಅಪ್ ರಮಣಿ ವೆಂಕಟ್ ಆಗಮಿಸಿ ಮಾತನಾಡಿ ಎಲ್ಲಾ ವಿದ್ಯಾರ್ಥಿಗಳಲ್ಲಿಯೂ ಒಬ್ಬೊಬ್ಬ ಸೂಪರ್ ಹೀರೋ ಇರುತ್ತಾನೆ. ಆದರೆ ಅದು ವಿದ್ಯಾರ್ಥಿಗಳಿಗೆ ತಿಳಿಯದೆ ನಾವು ಯಾರಿಗೂ ಸಮರಲ್ಲ ಎಂಬ ಋಣಾತ್ಮಕ ಆಲೋಚನೆಯಲ್ಲಿ ವಿದ್ಯಾರ್ಥಿಗಳು ಇರುತ್ತಾರೆ. ಇವರು ವಿದ್ಯಾರ್ಥಿಗಳಿಗೆ ವಿವಿಧ ನೈಜ ಅನುಭವಗಳನ್ನು ನೀಡುವುದರ ಮೂಲಕ ಅದಕ್ಕೆ ಹೇಗೆ ಪ್ರತಿಕ್ರಿಸುತ್ತಾರೆ ಮತ್ತು ವಿದ್ಯಾರ್ಥಿಗಳು ಮಾಡುವ ತಪ್ಪುಗಳೇನು ಮತ್ತು ಅದನ್ನು ಹೇಗೆ ಸರಿಪಡಿಸಿಕೊಳ್ಳಬೇಕೆಂದು ತಿಳಿಸಿದರು.ಕಾರ್ಯಾಗಾರವನ್ನು ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಡಾ. ಎಸ್. ಎನ್. ಭಟ್ ಉದ್ಘಾಟಿಸಿ ಈ ಕಾರ್ಯಗಾರದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಕಾರ್ಯಾಗಾರದ ಸಮಾರೋಪ ಸಮಾರಂಭಕ್ಕೆ ಆಗಮಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ರಾಮಕೃಷ್ಣ ಹೆಗಡೆ ವಿದ್ಯಾರ್ಥಿಗಳು ಮುಂಜಾನೆಯಿಂದ ಮುಸ್ಸಂಜೆವರೆಗೆ ಉತ್ಸಾಹದಿಂದ ಭಾಗವಹಿಸಿದ್ದನ್ನು ನೋಡಿ ಪ್ರಶಂಸಿಸಿದರು. ಈ ಕಾರ್ಯಾಗಾರದಲ್ಲಿ ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಕುಮಾರಿ ಶಾಂಭವಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.