ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೃಷಿ ಇಲಾಖೆಯಿಂದ ನಡೆದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳದಲ್ಲಿ ಮುಖ್ಯಮಂತ್ರಿ, ಕೃಷಿ ಸಚಿವರು ಹಾಗೂ ಇತರ ಗಣ್ಯರ ಸಮ್ಮುಖದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರಾಜ್ಯ ಮಟ್ಟದ ಕೃಷಿ ಪಂಡಿತ ಮತ್ತು ಕೃಷಿ ಪ್ರಶಸ್ತಿ
ಮಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೃಷಿ ಇಲಾಖೆಯಿಂದ ನಡೆದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳದಲ್ಲಿ ಮುಖ್ಯಮಂತ್ರಿ, ಕೃಷಿ ಸಚಿವರು ಹಾಗೂ ಇತರ ಗಣ್ಯರ ಸಮ್ಮುಖದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರಾಜ್ಯ ಮಟ್ಟದ ಕೃಷಿ ಪಂಡಿತ ಮತ್ತು ಕೃಷಿ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಲಾಯಿತು.ಜಿಲ್ಲೆಯ ಮಂಗಳೂರು, ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕುಗಳಿಂದ ಆಯ್ಕೆಯಾದ ಒಟ್ಟು 6 ಮಂದಿ ಸಾಧಕ ರೈತರಿಗೆ ಗೌರವ ಪ್ರದಾನ ಮಾಡಲಾಯಿತು.
ರಾಜ್ಯ ಮಟ್ಟದ ಪ್ರಶಸ್ತಿಗಳಲ್ಲಿ ಪ್ರಥಮ ಬಹುಮಾನಕ್ಕೆ 50,000 ರು., ದ್ವಿತೀಯ ಬಹುಮಾನ 40,000 ರು. ಮತ್ತು ತೃತೀಯ ಬಹುಮಾನ 35,000 ರು. ನಗದು ಬಹುಮಾನ ನೀಡಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಕ್ರಮವಾಗಿ 30,000 ರು., 25,000 ರು. ಮತ್ತು 20,000 ರು. ಬಹುಮಾನ ನೀಡಲಾಗುತ್ತದೆ.2022-23ನೇ ಸಾಲಿನ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಪ್ರೇಮ ಹೆಗಡೆ ಪ್ರಥಮ ಬಹುಮಾನ ಹಾಗೂ ಮೂಲ್ಕಿ ತಾಲೂಕಿನ ಎಳತ್ತೂರು ಗ್ರಾಮದ ಸೆಲಿಕ ದ್ವಿತೀಯ ಬಹುಮಾನ ಪಡೆದಿದ್ದರು. ಇವರು ಮುಂಗಾರು ಹಂಗಾಮಿನ ಮಳೆಯಾಶ್ರಿತ ಬತ್ತ ಬೆಳೆಯಲ್ಲಿ ಅತ್ಯಧಿಕ ಇಳುವರಿ ಸಾಧಿಸಿ ಮಹಿಳಾ ವಿಭಾಗದಲ್ಲಿ ವಿಜೇತರಾಗಿದ್ದಾರೆ.2024-25ನೇ ಸಾಲಿನ ಮುಂಗಾರು ಮಳೆಯಾಶ್ರಿತ ಬತ್ತದ ಬೆಳೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ನಾರಾಯಣ ನಾಯಕ್ ಪ್ರಥಮ ಬಹುಮಾನ ಪಡೆದಿದ್ದು, ಮಂಗಳೂರು ತಾಲೂಕಿನ ತಲಪಾಡಿಯ ಕೆ. ಶ್ಯಾಮ ಶೆಟ್ಟಿ ದ್ವಿತೀಯ ಬಹುಮಾನ ಪಡೆದಿದ್ದಾರೆ.
ರೈತ ಮಹಿಳೆಯರ ವಿಭಾಗದಲ್ಲಿ ಬಂಟ್ವಾಳ ತಾಲೂಕಿನ ಕಾವಳ ಪಡೂರು ಗ್ರಾಮದ ಲೀಲಾ ಪ್ರಥಮ ಹಾಗೂ ಕಾವಳ ಮೂಡೂರು ಗ್ರಾಮದ ಡಾಲಿ ಜೆ.ಜೆ ದ್ವಿತೀಯ ಬಹುಮಾನಕ್ಕೆ ಪಾತ್ರರಾಗಿದ್ದಾರೆ.ಈ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂಟ್ವಾಳ ತಾಲೂಕಿನ ಕಾವಳ ಮೂಡೂರು ಗ್ರಾಮದ ಡಾಲಿ ಜಿ.ಜೆ ಅವರು ಕೃಷಿ ಪಂಡಿತ ಪ್ರಥಮ ಬಹುಮಾನಕ್ಕೆ ಆಯ್ಕೆಯಾಗಿದ್ದಾರೆ.