ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಮಂಗಳೂರು ಹಾಗೂ ಎಬಿಎಸ್ ಆರ್ ಎಂ ವತಿಯಿಂದ ಸೋಮವಾರ ಸಂಜೆ 3.30ರಿಂದ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿರುವ ‘ಅಬ್ಬಕ್ಕ-500 ಪ್ರೇರಣಾದಾಯಿ ಉಪನ್ಯಾಸ’
ಮೂಡುಬಿದಿರೆ: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಮಂಗಳೂರು ಹಾಗೂ ಎಬಿಎಸ್ ಆರ್ ಎಂ ವತಿಯಿಂದ ಸೋಮವಾರ ಸಂಜೆ 3.30ರಿಂದ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿರುವ ‘ಅಬ್ಬಕ್ಕ-500 ಪ್ರೇರಣಾದಾಯಿ ಉಪನ್ಯಾಸ’ ಕಾರ್‍ಯಕ್ರಮದಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್‍ಯದರ್ಶಿ ರಶ್ಮಿತಾ ಜೈನ್ ಅವರಿಗೆ ‘ರಾಣಿ ಅಬ್ಬಕ್ಕ’ ವಿಶೇಷ ಪುರಸ್ಕಾರ ನೀಡಿ ಗೌರವಿಸಲಾಗುವುದು. ಶಿಕ್ಷಣ ಕ್ಷೇತ್ರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಇವರ ಅಪೂರ್ವ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.ಕಾರ್‍ಯಕ್ರಮವನ್ನು ವೀರರಾಣಿ ಅಬ್ಬಕ್ಕಳ ವಂಶಸ್ಥರಾದ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ ಉದ್ಘಾಟಿಸುವರು. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್‍ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ರವಿ ಅಲೆವೂರಾಯ, ಡಾ. ಮಾಧವ ಎಂ.ಕೆ. ಉಪಸ್ಥಿತರಿರುವರು.
ಇದೇ ಸಂದರ್ಭ ‘ರಾಣಿ ಅಬ್ಬಕ್ಕ’ ಕುರಿತಾಗಿ ಇದುವರೆಗೆ ಗಮನಾರ್ಹವಾಗಿ ಸೇವೆ ಸಲ್ಲಿಸಿದ ‘ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಚಯಗಿರಿ, ಬಂಟ್ವಾಳ’ದ ಅಧ್ಯಕ್ಷ ಡಾ.ಎಂ. ತುಕಾರಾಂ ಪೂಜಾರಿ, ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಉಳ್ಳಾಲದ ಅಧ್ಯಕ್ಷ ದಿನಕರ್ ಉಳ್ಳಾಲ್, ‘ಯಕ್ಷಾಂಗಣ ಮಂಗಳೂರು’ ಇದರ ಕಾರ್‍ಯಾಧ್ಯಕ್ಷ ಭಾಸ್ಕರ್ ರೈ ಕುಕ್ಕುವಳ್ಳಿ, ‘ಜವನೆರ್ ಬೆದ್ರ ಫೌಂಡೇಶನ್’ ಸಂಸ್ಥಾಪಕ ಅಮರ್ ಕೋಟೆ, ವಿಶ್ರಾಂತ ಪ್ರಾಂಶುಪಾಲ, ಸಾಹಿತಿ ಡಾ. ಯು.ಕೆ. ಯಾದವ ಸಸಿಹಿತ್ಲು ಅವರನ್ನು ಗೌರವಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.