ಸಾರಾಂಶ
ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭವು ಫೆ.28 ರಂದು ಬೆಳಗ್ಗೆ 10 ಗಂಟೆಗೆ ಕೊಡಗು ಗೌಡ ಸಮಾಜದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಬೆಂಗಳೂರು ಶಿಕ್ಷಣ ತಜ್ಞರು ಮತ್ತು ಚಿಂತಕರಾದ ಪ್ರೊ.ಕೆ.ಇ.ರಾಧಾಕೃಷ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ವಿಧಾನಸಭೆ ಮಾಜಿ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಅಲ್ಟ್ರಾ ಬಯೋಕೆಮ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ತೇನನ ರಾಜೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ಕೊಡಗು ಗೌಡ ಸಮಾಜದ ಅಧ್ಯಕ್ಷರಾದ ಪೇರಿಯನ ಜಯಾನಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ್, ಇತರರು ಪಾಲ್ಗೊಳ್ಳಲಿದ್ದಾರೆ.ಸದಸ್ಯರಾದ ಚಂದ್ರಶೇಖರ್ ಪೇರಾಲು, ಲತಾಪ್ರಸಾದ್ ಕುದ್ಪಾಜೆ, ಸೂದನ ಎಸ್.ಈರಪ್ಪ, ವಿನೋದ್ ಮೂಡಗದ್ದೆ, ತೇಜಕುಮಾರ್ ಕುಡೆಕಲ್ಲು, ಪಿ.ಎಸ್.ಕಾರ್ಯಪ್ಪ, ಲೋಕೇಶ್ ಊರುಬೈಲು, ಗೋಪಾಲ ಪೆರಾಜೆ, ಮೋಹನ ಪೊನ್ನಚನ, ಚಂದ್ರಾವತಿ ಬಡ್ಡಡ್ಕ, ಡಾ.ಎನ್.ಎ.ಜ್ಞಾನೇಶ್, ಸಂದೀಪ್ ಪೂಳಕಂಡ, ಕುದುಪಜೆ ಕೆ.ಪ್ರಕಾಶ್ ಇತರರು ಭಾಗವಹಿಸಲಿದ್ದಾರೆ.
ಫೆಬ್ರವರಿ, 28 ರಂದು ಬೆಳಗ್ಗೆ 9.30 ರಿಂದ ಸುಳ್ಯದ ಆರತಿ ಪುರುಷೋತ್ತಮ ಮತ್ತು ಬಳಗದವರಿಂದ ಅರೆಭಾಷೆ ಹಾಡುಗಳ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.2022ನೇ ಗೌರವ ಪ್ರಶಸ್ತಿ ಪಡೆದವರ ವಿವರ: ಸಂಶೋಧನೆ ಮತ್ತು ಅರೆಭಾಷೆ ಸಾಹಿತ್ಯ ಕ್ಷೇತ್ರದ ಡಾ.ಕಾವೇರಿಮನೆ ಬೋಜಪ್ಪ, ಶಿಕ್ಷಣ ಮತ್ತು ವೈದ್ಯಕೀಯ ಸೇವೆಗೆ ಡಾ.ಕೆ.ವಿ.ಚಿದಾನಂದ, ಅರೆಭಾಷೆ ಮತ್ತು ಸಂಸ್ಕೃತಿ ಸೇವೆಗೆ ತುಂತಜೆ ವೆಂಕಟೇಶ್ (ಗಣೇಶ್).
2023ನೇ ಗೌರವ ಪ್ರಶಸ್ತಿ ಪಡೆದವರ ವಿವರ: ಅರೆಭಾಷೆ ಸಾಹಿತ್ಯ ಮತ್ತು ಶೈಕ್ಷಣಿಕ ಸೇವೆಗೆ ಕುಯಿಂತೋಡು ದಾಮೋದರ, ಅರೆಭಾಷೆ ಅಧ್ಯಯನ ಮತ್ತು ಸಂಶೋಧನೆಗೆ ಎ.ಕೆ.ಹಿಮಕರ ಮತ್ತು ಅರೆಭಾಷೆ ಸಾಧಕಿ ಮತ್ತು ಕಲಾ ಪೋಷಕರಾದ ಕೂಡಕಂಡಿ ಕಾವೇರಮ್ಮ ಸೋಮಣ್ಣ.ಅಕಾಡೆಮಿ ಫೆಲೋಶಿಫ್ ಪಡೆದ ಸಂಶೋಧನಾ ಪ್ರಬಂಧಗಳ ಬಿಡುಗಡೆ, ಅರೆಭಾಷೆ ಕೃತಿಗಳ ಲೋಕಾರ್ಪಣೆ, 2022 ಮತ್ತು 2023ನೇ ಸಾಲಿನಲ್ಲಿ ಬಿಡುಗಡೆಗೊಂಡ ಅರೆಭಾಷೆ ಕೃತಿಗಳಿಗೆ ಪ್ರೋತ್ಸಾಹಕ ಬಹುಮಾನ, ಅರೆಭಾಷೆ ಮಾತಾಡುವ ಪ.ಜಾತಿ, ಪ.ಪಂಗಡ ಮತ್ತು ಇತರ ಫಲಾನುಭವಿಗಳಿಗೆ ಸಾಂಸ್ಕೃತಿಕ ಮತ್ತು ವಾದ್ಯ ಪರಿಕರಗಳ ವಿತರಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.