ಸಾರಾಂಶ
2023-24ನೇ ಸಾಲಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ‘ಅತಿ ಹೆಚ್ಚು ಮೊತ್ತದ ಇ-ಸ್ಟಾಂಪಿಂಗ್ ಮುದ್ರಿಸಿರುವ ಸಂಘ’ ಪ್ರಶಸ್ತಿಯನ್ನು ಆತ್ಮಶಕ್ತಿ ಸಂಘದ ಅಧ್ಯಕ್ಷ ಹಾಗೂ ಮಹಾಮಂಡಳದ ನಿರ್ದೇಶಕ ಚಿತ್ತರಂಜನ್ ಬೋಳಾರ್ ಅವರಿಗೆ ಮಹಾಮಂಡಳದ ಅಧ್ಯಕ್ಷ ವಿ. ರಾಜು ನೀಡಿ ಗೌರವಿಸಿದರು.
ಮಂಗಳೂರು: ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ 20ನೇ ವಾರ್ಷಿಕ ಸಾಮಾನ್ಯ ಸಭೆಯು ಬೆಂಗಳೂರಿನಲ್ಲಿ ಮಹಾಮಂಡಳದ ಅಧ್ಯಕ್ಷ ವಿ.ರಾಜು ಅಧ್ಯಕ್ಷತೆಯಲ್ಲಿ ಜರುಗಿತು. ಇದೇ ವೇಳೆ ರಾಜ್ಯದಲ್ಲಿ ಹೆಚ್ಚು ಮುದ್ರಾಂಕ ಶುಲ್ಕ ಪಡೆದು ಹಾಗೂ ಇ-ಸ್ಟಾಂಪಿಂಗ್ ಪ್ರತಿಗಳನ್ನು ಮುದ್ರಿಸಿ ಮಾರಾಟ ಮಾಡಿರುವ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
2023-24ನೇ ಸಾಲಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ‘ಅತಿ ಹೆಚ್ಚು ಮೊತ್ತದ ಇ-ಸ್ಟಾಂಪಿಂಗ್ ಮುದ್ರಿಸಿರುವ ಸಂಘ’ ಪ್ರಶಸ್ತಿಯನ್ನು ಆತ್ಮಶಕ್ತಿ ಸಂಘದ ಅಧ್ಯಕ್ಷ ಹಾಗೂ ಮಹಾಮಂಡಳದ ನಿರ್ದೇಶಕ ಚಿತ್ತರಂಜನ್ ಬೋಳಾರ್ ಅವರಿಗೆ ಮಹಾಮಂಡಳದ ಅಧ್ಯಕ್ಷ ವಿ. ರಾಜು ನೀಡಿ ಗೌರವಿಸಿದರು. ಸಂಘವು ಕಳೆದ 20 ವರ್ಷಗಳಿಂದ ಸತತವಾಗಿ ಇ ಸ್ಟಾಂಪಿಂಗ್ ಸೇವೆಗೆ ಪ್ರಶಸ್ತಿ ಪಡೆಯುತ್ತಿದೆ.