ಸಾರಾಂಶ
ಬಾಳೆಹೊನ್ನೂರು, ಡೆಂಘೀ ಕುರಿತು ಪ್ರತಿಯೊಬ್ಬರೂ ಜಾಗೃತಿ ಹೊಂದಿರಬೇಕಿರುವುದು ಅಗತ್ಯವಾಗಿದೆ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಪ್ರವೀಣ್ ಹೇಳಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡೆಂಘೀ ಜಾಗೃತಿ ಶಿಬಿರ
ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರುಡೆಂಘೀ ಕುರಿತು ಪ್ರತಿಯೊಬ್ಬರೂ ಜಾಗೃತಿ ಹೊಂದಿರಬೇಕಿರುವುದು ಅಗತ್ಯವಾಗಿದೆ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಪ್ರವೀಣ್ ಹೇಳಿದರು.
ಪಟ್ಟಣದ ಎಸ್‌ಜೆಆರ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಡೆಂಘೀ ಜಾಗೃತಿ ಶಿಬಿರದಲ್ಲಿ ಮಾತನಾಡಿದರು. ಡೆಂಘೀ ರೋಗದ ಕುರಿತು ಭಯ ಹೊಂದದೆ ಎಚ್ಚರಿಕೆಯ ಕ್ರಮ ಅನುಸರಿಸಬೇಕು. ಡೆಂಘೀ ರೋಗದ ಲಕ್ಷಣಗಳು ಕಂಡುಬಂದಲ್ಲಿ ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.ರೋಟರಿ ಕ್ಲಬ್ ಅಧ್ಯಕ್ಷ ಸಿ.ಪಿ.ರಮೇಶ್ ಮಾತನಾಡಿ, ಡೆಂಘೀ ಕುರಿತು ಪ್ರತಿಯೊಬ್ಬ ಮಕ್ಕಳು ಮನೆ ಮನೆಯಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಆರೋಗ್ಯ ನಿರೀಕ್ಷಕ ಭಗವಾನ್ ಮಾತನಾಡಿ, ಡೆಂಘೀ ತಡೆಗಾಗಿ ಸುತ್ತಮುತ್ತಲಿನ ಜಾಗದಲ್ಲಿ ನೀರು ನಿಲ್ಲದಂತೆ ನೋಡಿಕೊಂಡು ಜಾಗ್ರತೆ ವಹಿಸಬೇಕು ಎಂದರು. ಪ್ರಾಚಾರ್ಯ ಕೆ.ಆರ್.ಬೂದೇಶ ಮಾತನಾಡಿ, ಡೆಂಘೀ ಜ್ವರ ಬಂದದ್ದು ತಕ್ಷಣದಲ್ಲಿ ತಿಳಿಯುವುದಿಲ್ಲ. ನಾವೇ ಡಾಕ್ಟರ್ ಆಗಿ ಮಾತ್ರೆ ತೆಗೆದುಕೊಳ್ಳದೆ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆದು ಮುನ್ನೆಚ್ಚರಿಕೆ ಕ್ರಮ ಅನುಸರಿಸಬೇಕು ಎಂದರು. ರೋಟರಿ ಕಾರ್ಯದರ್ಶಿ ಸಾಗರ್, ಸದಸ್ಯ ವೆಂಕಟೇಶ್ ಭಟ್, ಶಿಕ್ಷಕ ಕುಮಾರ್ ಚಂದ್ರನಾಯಕ್, ಉಪನ್ಯಾಸಕ ಪ್ರಶಾಂತ್ ಕುಮಾರ್, ರಾಕೇಶ್ ಮತ್ತಿತರರು ಹಾಜರಿದ್ದರು.೧೦ಬಿಹೆಚ್‌ಆರ್ ೧:
ಬಾಳೆಹೊನ್ನೂರಿನ ಎಸ್‌ಜೆಆರ್ ಕಾಲೇಜಿನಲ್ಲಿ ನಡೆದ ಡೆಂಘೀ ಮಾಹಿತಿ ಕಾರ್ಯಾಗಾರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಪ್ರವೀಣ್ ಮಾತನಾಡಿದರು. ಸಿ.ಪಿ.ರಮೇಶ್, ಭಗವಾನ್, ಕೆ.ಆರ್.ಬೂದೇಶ್ ಇದ್ದರು.