ಸಾರಾಂಶ
ಕನ್ನಡಪ್ರಭ ವಾರ್ತೆ ಲೋಕಾಪುರ
ಬಾಯಿ ಮತ್ತು ವಸಡು ರೋಗಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಇಂದು ಅಗತ್ಯವಾಗಿದೆ ಎಂದು ಪ್ರಾಚಾರ್ಯ ಪರಶುರಾಮ ವನಸಿ ಹೇಳಿದರು.ಪಟ್ಟಣದ ಬಸವೇಶ್ವರ ಅಂತಾರಾಷ್ಠ್ರೀಯ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡ ಉಚಿತ ದಂತ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಹಲ್ಲು ಮತ್ತು ವಸಡು ದೀರ್ಘಕಾಲ ಆರೋಗ್ಯವಾಗಿಡಲು ಕನಿಷ್ಠ ಆರು ತಿಂಗಳಿಗೊಮ್ಮೆಯಾದರೂ ತಪಾಸಣೆ ಮಾಡಿಕೊಳ್ಳಬೇಕು ಎಂದು ಹೇಳಿದರು.ದಂತ ವೈದ್ಯ ಡಾ.ಸನಾ ಕೊಪ್ಪದ ಮಾತನಾಡಿ, ಹಲ್ಲುಗಳ ಸ್ವಚ್ಛತೆ ಕಾಪಾಡಿಕೊಳ್ಳುವ ಜತೆಗೆ ಸೊಪ್ಪು, ತರಕಾರಿ, ಹಣ್ಣು, ರಾಗಿ ಮುದ್ದೆಯಂತಹ ಖನಿಜಯುಕ್ತ ಆಹಾರ ಸೇವಿಸುವುದರಿಂದ ಹಲ್ಲುಗಳ ರಕ್ಷಣೆ ಆಗುತ್ತವೆ. ಪ್ರತಿಯೊಬ್ಬರು ಪ್ರತ್ಯೇಕ ಬ್ರಷ್ ಬಳಸಬೇಕು. ಆಹಾರ ಪದಾರ್ಥ ಸೇವಿಸಿದ ಮೇಲೆ ನೀರಿನಲ್ಲಿ ಬಾಯಿ ಮುಕ್ಕಳಿಸಬೇಕು, ಹಲ್ಲು ಉಜ್ಜುವಾಗ ವಸಡಿನಲ್ಲಿ ರಕ್ತಸ್ರಾವವಾಗುತ್ತಿದ್ದರೆ, ವೈದ್ಯರ ಸಲಹೆ ಪಡೆದುಕೊಳ್ಳಬೇಕು. ಬೆಳಿಗ್ಗೆ ಮತ್ತು ರಾತ್ರಿ ತಪ್ಪದೇ ಬ್ರಷ್ ಮಾಡಬೇಕು ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.ಶಿಬಿರಕ್ಕೆ ಆಗಮಿಸಿದ್ದ ದಂತ ವೈದ್ಯರು ಹಲ್ಲುಗಳನ್ನು ಸುರಕ್ಷಿತವಾಗಿಡುವಂತೆ ಸಲಹೆ ನೀಡಿದರು. ೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು. ದಂತ ವೈದ್ಯರು ಪ್ರತಿಯೊಬ್ಬ ವಿದ್ಯಾರ್ಥಿನಿಯರ ಹಲ್ಲುಗಳನ್ನು ಪರೀಕ್ಷಿಸಿ ಸಲಹೆ ನೀಡಿದರು. ಶಿಬಿರದಲ್ಲಿ ಡಾ.ಕಲ್ಪನಾ ವಿರಾಂಕಿಡಾ, ಡಾ.ದೇಶಮುಖ್ ಜೀಬಾ ಸಕಿನಖಾನ, ಡಾ.ಸನಾ ಕೊಪ್ಪದ, ಡಾ.ಸೈಮಾ ಅಹ್ಮದ, ನೀಲಮ್ಮ ರಾಜನಾಲ, ಮಹಾದೇವಿ ಗೌಡರ, ಪೀರಮಹಾಸಿದ್ದ, ನಹಿದ ಹಾಗೂ ರೇಖಾ, ಸುರೇಶ ಸವದತ್ತಿ, ವಿಜಯಲಕ್ಷ್ಮೀ ಹಿರೇಮಠ ಶಾಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.