ಹೃದಯಾಘಾತಗಳ ಬಗ್ಗೆ ಮುನ್ನೆಚ್ಚರಿಕೆ ಬಗ್ಗೆ ಅರಿವು

| Published : Jul 20 2025, 01:17 AM IST

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳ ಬಗ್ಗೆ ಮುನ್ನೆಚ್ಚರಿಕೆ ಹಾಗೂ ಅರಿವು ಕಾರ್ಯಕ್ರಮ ಮತ್ತು ದಿನನಿತ್ಯ ಆಹಾರ ಕ್ರಮಗಳ ಬಗ್ಗೆ ಮಾಹಿತಿ ಮತ್ತು ಪ್ರಥಮ ಚಿಕಿತ್ಸೆ ಹಾಗೂ ಸಿಪಿಆರ್‌ ವಿಧಾನಗಳ ಅರಿವು ಕಾರ್ಯಕ್ರಮವು ಜುಲೈ ೨೦ರಂದು ಭಾನುವಾರದಂದು ಹಮ್ಮಿಕೊಳ್ಳಲಾಗಿದೆ ಎಂದು ಸಾಲಗಾಮೆ ರಸ್ತೆ, ಕೃಷ್ಣ ಅಂಧ ಮಕ್ಕಳ ಶಾಲೆಯ ಪಕ್ಕ ಇರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಸೂತಿ ಸ್ತ್ರೀರೋಗ ತಜ್ಞರಾದ ಡಾ. ಸಾವಿತ್ರಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳ ಬಗ್ಗೆ ಮುನ್ನೆಚ್ಚರಿಕೆ ಹಾಗೂ ಅರಿವು ಕಾರ್ಯಕ್ರಮ ಮತ್ತು ದಿನನಿತ್ಯ ಆಹಾರ ಕ್ರಮಗಳ ಬಗ್ಗೆ ಮಾಹಿತಿ ಮತ್ತು ಪ್ರಥಮ ಚಿಕಿತ್ಸೆ ಹಾಗೂ ಸಿಪಿಆರ್‌ ವಿಧಾನಗಳ ಅರಿವು ಕಾರ್ಯಕ್ರಮವು ಜುಲೈ ೨೦ರಂದು ಭಾನುವಾರದಂದು ಹಮ್ಮಿಕೊಳ್ಳಲಾಗಿದೆ ಎಂದು ಸಾಲಗಾಮೆ ರಸ್ತೆ, ಕೃಷ್ಣ ಅಂಧ ಮಕ್ಕಳ ಶಾಲೆಯ ಪಕ್ಕ ಇರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಸೂತಿ ಸ್ತ್ರೀರೋಗ ತಜ್ಞರಾದ ಡಾ. ಸಾವಿತ್ರಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಭಾನುವಾರದಂದು ಬೆಳಗ್ಗೆ ೧೦ ಗಂಟೆಗೆ ಸರಿಯಾಗಿ ಸಾಲಗಾಮೆ ರಸ್ತೆ, ಕೃಷ್ಣ ಅಂಧ ಮಕ್ಕಳ ಶಾಲೆಯ ಪಕ್ಕ ಇರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಹಾಸನ ಶಾಖೆಯ ಕಟ್ಟಡದಲ್ಲಿ ಇತ್ತೀಚಿಗೆ ಹೆಚ್ಚುತ್ತಿರುವ ಹೃದಯಘಾತಗಳ ಮುನ್ನೆಚ್ಚರಿಕೆ ಹಾಗೂ ಅರಿವು ಕಾರ್ಯಕ್ರಮವನ್ನು ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆ. ಮೈಸೂರು ಸಂಸ್ಥೆಯ ಹೃದ್ರೋಗ ತಜ್ಞರಾದ ಡಾ.ವೈ.ಎಸ್ ಸೀಮಂತ್ ಅವರಿಂದ ಹೃದಯಘಾತಗಳ ತಡೆಗಟ್ಟುವಿಕೆ ಹಾಗೂ ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ಹೃದಯ ಸಂಬಂಧಿ ಸಮಸ್ಯೆಗಳ ಬಗ್ಗೆ ಪ್ರಶೋತ್ತರ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದೇ ಕಾರ್ಯಕ್ರಮದಲ್ಲಿ ಡಾ. ಕವಿತಾ, ಡಯಟಿಶಿಯನ್, ಎಸ್.ಡಿ.ಎಮ್ ಕಾಲೇಜು ಮತ್ತು ಆಸ್ಪತ್ರೆ ಹಾಸನ ಅವರಿಂದ ದಿನನಿತ್ಯದ ಆಹಾರ ಕ್ರಮಗಳ ಬಗೆಗಿನ ಸಂಪೂರ್ಣ ಮಾಹಿತಿ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕರು ಹಾಗೂ ರಾಷ್ಟ್ರೀಯ ಪ್ರಥಮ ಚಿಕಿತ್ಸೆ ತರಬೇತುದಾರರು ಆದ ಡಾ.ತೇಜಸ್ವಿ ಎಚ್.ಜೆ ಅವರಿಂದ ಹೃದಯಘಾತವಾದ ಸಂದರ್ಭದಲ್ಲಿ ಮಾಡಬೇಕಾದ ಪ್ರಥಮ ಚಿಕಿತ್ಸೆ ಹಾಗೂ ಸಿಪಿಆರ್‌ ವಿಧಾನಗಳ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು. ಹೆಚ್ಚಿನ ಮಾಹಿತಿಗಾಗಿ ೮೦೭೩೪೮೫೩೧೭ ಸಂಪರ್ಕಿಸಬಹುದಾಗಿದೆ ಎಂದು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಉಪಸಭಾಪತಿ ಡಾ. ವೈ.ಎಸ್. ವೀರಭದ್ರಪ್ಪ, ಡಾ. ರಂಗಲಕ್ಷ್ಮಿ, ನಿರ್ದೇಶಕರಾದ ಶಬ್ಬೀರ್ ಅಹಮ್ಮದ್, ಬಿ.ಆರ್‌. ಉದಯ್ ಕುಮಾರ್, ಎಸ್‌ಎಸ್. ಪಾಷಾ, ಕೆ.ಟಿ.ಜಯಶ್ರೀ ಇತರರು ಉಪಸ್ಥಿತರಿದ್ದರು.