ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ನೀರಿನ ಮೂಲಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಪರೀಕ್ಷಿಸಿ, ಫಲಿತಾಂಶವನ್ನು ಪ್ರತ್ಯೇಕ ಪುಸ್ತಕದಲ್ಲಿ ಕ್ರಮಬದ್ಧವಾಗಿ ನಮೂದಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೆ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಯೋಗದಲ್ಲಿ ಫೀಲ್ಡ್ ಟೆಸ್ಟ್ ಕಿಟ್(ಎಫ್.ಟಿ.ಕೆ) ಮತ್ತು ಹೆಚ್೨ಎಸ್ ವಾಯೀಲ್ಸ್ ಉಪಯೋಗಿಸಿ ನೀರಿನ ಪರೀಕ್ಷೆಗಳನ್ನು ಕೈಗೊಳ್ಳಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಜಿಲ್ಲೆಯು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಿಂದ ಕೂಡಿದ್ದು, ಜನರಿಗೆ ನೀರನ್ನು ಕುದಿಸಿ ಆರಿಸಿ ಕುಡಿಯುವ ಅಭ್ಯಾಸದ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಪಂಚಾಯಿತಿ ವ್ಯಾಪ್ತಿಯ ಶಾಲಾ ಮಕ್ಕಳ ಮೂಲಕ ಜನರಿಗೆ ಕುಡಿಯುವ ನೀರನ್ನು ಕುದಿಸಿ ಆರಿಸಿ ಶುದ್ಧವಾದ ನೀರನ್ನು ಕುಡಿಯುವಂತೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು ಎಂದರು.
ಹನೂರು ಮತ್ತು ಯಳಂದರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ಮಾತನಾಡಿ, ನೀರಿನ ಸ್ಥಾವರಗಳು ಹಾಗೂ ನೀರಿನ ಸರಬರಾಜು ಪೈಪ್‌ಲೈನ್ ಸೋರಿಕೆ ಆಗುವುದನ್ನು ತಡೆಗಟ್ಟಬೇಕು. ವಾರದಲ್ಲಿ ಒಂದು ದಿನ ನೀರಗಂಟಿಗಳನ್ನೊಳಗೊಂಡ ಸಭೆ ನಡೆಸಿ ನೀರಿನ ಮೂಲಗಳ ಬಗ್ಗೆ ಮಾಹಿತಿ ಪಡೆಯಬೇಕಾಗಿದೆ ಎಂದರು.ಕೊಳ್ಳೇಗಾಲ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ ಮಾತನಾಡಿ, ಸ್ಥಾವರಗಳಲ್ಲಿ ಹೆಚ್ಚುವರಿ ನೀರು ತುಂಬಿದಾಗ ತಕ್ಷಣ ನಿಲ್ಲಿಸುವಂತಹ ನೂತನ ತಂತ್ರಜ್ಞಾನ ಈಗಾಗಲೇ ಜಾರಿಗೆ ಬಂದಿವೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಈ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು. ಇದರಿಂದ ನೀರು ಅನಾವಶ್ಯಕವಾಗಿ ಪೋಲಾಗುವುದನ್ನು ತಡೆಗಟ್ಟಬಹುದು ಎಂದು ಹೇಳಿದರು.
ಜಿಪಂ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್ ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರು ಕಲುಷಿತವಾಗದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಎಚ್ಚರ ವಹಿಸಬೇಕು. ಇಲಾಖೆಯಿಂದ ವಿತರಿಸಿರುವ ಫೀಲ್ಡ್ ಟೆಸ್ಟ್ ಕಿಟ್ (ಎಫ್.ಟಿ.ಕೆ) ಬಳಕೆ ಮಾಡಿ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ನೀರಿನ ಮೂಲಗಳನ್ನು ಪರೀಕ್ಷಿಸಿ ವರದಿಯನ್ನು ಜಿಲ್ಲಾ ಪಂಚಾಯಿತಿಗೆ ಕಳುಹಿಸಿಕೊಡಬೇಕು ಎಂದರುಜೆ.ಜೆ.ಎಂ ಜಿಲ್ಲಾ ಯೋಜನಾ ವ್ಯವಸ್ಥಾಪಕ ಆಶಾ ರಮೇಶ್ ಮಾತನಾಡಿದರು. ಚಾಮರಾಜನಗರ ತಾಲೂಕು ಪ್ರಯೋಗಾಲಯದ ಹಿರಿಯ ವಿಶ್ಲೇಷಕರಾದ ಕೌಶಿಕ್, ಕೊಳ್ಳೇಗಾಲ ತಾಲೂಕು ಪ್ರಯೋಗಾಲಯದ ವಿಶ್ಲೇಷಕರಾದ ಅನಿಲ್‌ಕುಮಾರ್, ಕಿರಿಯ ವಿಶ್ಲೇಷಕರಾದ ರವಿಕುಮಾರ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು, ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
)
;Resize=(128,128))
;Resize=(128,128))
;Resize=(128,128))
;Resize=(128,128))