ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆಗೆ ಪೋಕ್ಸೋ ಕಾಯ್ದೆ 2012 ಜಾರಿಗೊಳಿಸಲಾಗಿದೆ. ವಿದ್ಯಾರ್ಥಿಗಳು ಶಾಲಾ ಹಂತದಲ್ಲಿ ಮಕ್ಕಳ ರಕ್ಷಣೆ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಎಚ್.ವಿ. ಹೇಳಿದರು.
ಹಾವೇರಿ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆಗೆ ಪೋಕ್ಸೋ ಕಾಯ್ದೆ 2012 ಜಾರಿಗೊಳಿಸಲಾಗಿದೆ. ವಿದ್ಯಾರ್ಥಿಗಳು ಶಾಲಾ ಹಂತದಲ್ಲಿ ಮಕ್ಕಳ ರಕ್ಷಣೆ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಎಚ್.ವಿ. ಹೇಳಿದರು.
ನಗರದ ಕೆಎಲ್‌ಇ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿ ಆಯೋಜಿಸಲಾದ ರಸ್ತೆ ಸುರಕ್ಷತಾ ನಿಯಮಗಳು, ವರದಕ್ಷಿಣೆ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ರಸ್ತೆ ಸುರಕ್ಷತಾ ನಿಯಮಗಳು, ವರದಕ್ಷಿಣೆ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆಗಳ ಪುಸ್ತಕಗಳನ್ನು ಹೆಚ್ಚು ಓದಬೇಕು ಹಾಗೂ ಇತರರಿಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.ಶಾಲೆಯ ಪ್ರಾಚಾರ್ಯರಾದ ಸಪ್ನಾ ಆರ್. ಲೋಬೋ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ ಅವರು ವರದಕ್ಷಿಣೆ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆ ಕುರಿತು ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ ಲೀಲಾ ಕೆ. ಅವರು ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಉಪನ್ಯಾಸ ನೀಡಿದರು.
ವಿದ್ಯಾರ್ಥಿಗಳಿಗೆ ವಿವಿಧ ಕಾಯ್ದೆಗಳ ಕುರಿತು ರಸಪ್ರಶ್ನೆ ಕಾರ್ಯಕ್ರಮ ನಡೆಸಲಾಯಿತು ಹಾಗೂ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ರಸ್ತೆ ಸುರಕ್ಷತೆ ಕುರಿತು ವಿಡಿಯೋ ಪ್ರದರ್ಶನ ಮಾಡಲಾಯಿತು.