ಉಡುಪಿ: ವಿಶ್ವ ಪರಿಸರ ದಿನಾಚರಣೆ ಇಂದು ಜಗತ್ತಿನಾದ್ಯಂತ ಪರಿಸರದ ಬಗ್ಗೆ ಕಾಳಜಿ ವಹಿಸಲು ಜನರನ್ನು ಪ್ರೇರೇಪಿಸುವ ಮಹತ್ವದ ವೇದಿಕೆಯಾಗಿದೆ. ಮಾನವ ತನ್ನ ಅನುಕೂಲಕ್ಕೆ ತಕ್ಕಂತೆ ಪರಿಸರವನ್ನು ಮಿತಿ ಮೀರಿ ಬಳಸಿಕೊಂಡ ಕಾರಣಕ್ಕೆ ಇಂದು ಹವಾಮಾನ ಬದಲಾವಣೆ, ತಾಪಮಾನ ಏರಿಕೆ, ಪ್ರವಾಹ, ಬರ ಹಾಗೂ ಇತರ ಪ್ರಕೃತಿ ವಿಕೋಪಗಳಿಗೆ ಸಾಕ್ಷಿಯಾಗುತ್ತಿದ್ದು, ಪರಿಸರ ಸಮತೋಲನ ಹದಗೆಡುತ್ತಿದೆ. ಸಸಿ ನೆಟ್ಟು ಪೋಷಿಸಬೇಕು, ಪರಿಸರ ಸ್ವಚ್ಛತೆ ಕಾಪಾಡಿ, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು” ಎಂದು ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ ಹೇಳಿದರು. ಅವರು ಕಾಲೇಜಿನಲ್ಲಿ ಐಕ್ಯುಎಸಿ, ಅಭ್ಯದಯ ಸಮಾಜ ಕಾರ್ಯ ವೇದಿಕೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಸಸಿ ವಿತರಿಸಲಾಯಿತು ಮತ್ತು ಕಾಲೇಜು ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.
ಈ ಕಾರ್ಯಕ್ರಮದಲ್ಲಿ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಇಲ್ಲಿನ ಪ್ರಾಂಶುಪಾಲ ಡಾ. ಸೋಜನ್ ಕೆ.ಜಿ., ಕಾಲೇಜಿನ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಸುಷ್ಮಾ ಟಿ. ಮತ್ತು ರುಖಿಯತ್, ಐಕ್ಯುಎಸಿ ಸಂಚಾಲಕ ಡಾ. ವಿಷ್ಣುಮೂರ್ತಿ ಪ್ರಭು, ಎನ್ ಎಸ್ ಎಸ್ ಅಧಿಕಾರಿ ಪ್ರಸಾದ್ ಎಚ್.ಎಂ. ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಡಾ. ಗಣೇಶ್ ಪ್ರಸಾದ್ ಜಿ. ನಾಯಕ್ ಕಾರ್ಯಕ್ರಮ ನಿರೂಪಿಸಿದರು.ಪರಿಸರ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಅಗತ್ಯ: ನಿತ್ಯಾನಂದ
ವಿಶ್ವ ಪರಿಸರ ದಿನಾಚರಣೆ ಇಂದು ಜಗತ್ತಿನಾದ್ಯಂತ ಪರಿಸರದ ಬಗ್ಗೆ ಕಾಳಜಿ ವಹಿಸಲು ಜನರನ್ನು ಪ್ರೇರೇಪಿಸುವ ಮಹತ್ವದ ವೇದಿಕೆಯಾಗಿದೆ ಎಂದು ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವಕರ ಹೇಳಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.