ಕ್ರೀಡೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಅಗತ್ಯ: ಕೆ.ಜೆ.ರೂಪಶ್ರೀ

| Published : Sep 01 2024, 01:47 AM IST

ಕ್ರೀಡೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಅಗತ್ಯ: ಕೆ.ಜೆ.ರೂಪಶ್ರೀ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಪಾಲ್ಗೊಂಡರೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಬಹುದು ಎಂದು ಕಬ್ಬಡಿ ರಾಷ್ಟ್ರೀಯ ಆಟಗಾರ, ಕಬಡ್ಡಿ ತರಬೇತುದಾರ ಕೆ.ಜೆ.ರೂಪಶ್ರೀ ಹೇಳಿದರು. ಚನ್ನಪಟ್ಟಣದಲ್ಲಿ ಕ್ರೀಡಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚನ್ನಪಟ್ಟಣ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಪಾಲ್ಗೊಂಡರೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಬಹುದು ಎಂದು ಕಬ್ಬಡಿ ರಾಷ್ಟ್ರೀಯ ಆಟಗಾರ, ಕಬಡ್ಡಿ ತರಬೇತುದಾರ ಕೆ.ಜೆ.ರೂಪಶ್ರೀ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಜೀವ ರತ್ನ ಮಹಲ್ ಕಾಲೇಜಿನ ಸಭಾಂಗಣದಲ್ಲಿ ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ದೇಶಾದ್ಯಂತ ಪ್ರತಿ ವರ್ಷ ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಗುತ್ತದೆ. ಪ್ರತಿ ವರ್ಷ ಆಗಸ್ಟ್ 29 ರಂದು ಈ ದಿನಾಚರಣೆಯನ್ನು ದೇಶಾದ್ಯಂತ ವಿಶೇಷವಾಗಿ ಆಚರಿಸಲಾಗುತ್ತದೆ. ಹೆಚ್ಚಿನ ಜನರು ದೈಹಿಕ ಚುಟವಟಿಕೆಯಲ್ಲಿ ಹಾಗೂ ಕ್ರೀಡೆಯಲ್ಲಿ ಭಾಗವಹಿಸುವಂತೆ ಉತ್ತೇಜಿಸಲು ಪ್ರತಿ ವರ್ಷ ದೇಶದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರಿ ಉದ್ಯೋಗದ ಅವಕಾಶಗಳು ಕೂಡ ಲಭ್ಯವಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೊಫೆಸರ್ ಉಷಾ ಮಾಲಿನಿ ಅಧ್ಯಕ್ಷೀಯ ನುಡಿಯಲ್ಲಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಂಡು ಆರೋಗ್ಯಕರ ಜೀವನ ನಡೆಸಲು ಕರೆ ನೀಡಿದರು.

ಕಾರ್ಯಕ್ರಮವನ್ನು ಅನುಷಾ ನಿರೂಪಿಸಿದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ನಂಜುಂಡ , ಡಾ.ರೀಮಾ, ಡಾ. ರಮೇಶ್ ಉಪಸ್ಥಿತರಿದ್ದರು.

ಮ್ಯಾರಥಾನ್‌ಗೆ ಚಾಲನೆ

ರಾಮನಗರ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಶುಕ್ರವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 2024-25ನೇ ಸಾಲಿನ ಮ್ಯಾರಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚೇತನ್ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗಯ್ಯ, ದೈಹಿಕ ಶಿಕ್ಷಣದ ಜಿಲ್ಲಾ ಶಿಕ್ಷಣಾಧಿಕಾರಿ ಸುಂದರೇಗೌಡ, ತಾಲೂಕು ಶಿಕ್ಷಣಾಧಿಕಾರಿ ನೀಲಕಂಠ ಸ್ವಾಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್. ಅನಿತಾ, ರಾಮನಗರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸತೀಶ್ ಕೆ. ಉಪಸ್ಥಿತರಿದ್ದರು.

------------------------

31ಕೆಆರ್ ಎಂಎನ್ 6.ಜೆಪಿಜಿ

ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 2024-25ನೇ ಸಾಲಿನ ಮ್ಯಾರಥಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

-------------------------