ಸಾರಾಂಶ
ಕಾರ್ಯಾಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಕೆ. ಅಮೃತ, ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಮನುಕುಲಕ್ಕೆ ಮಾರಕವಾಗಿರುವ ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವುದು ಅಗತ್ಯ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ್ ಹೇಳಿದರು.ತಾಲೂಕಿನ ಕಿರಂಗೂರು ಗ್ರಾಮದ ಗ್ರಾಮ ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಗ್ರಾಮ ಆರೋಗ್ಯ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಹೆಣ್ಣು ಭ್ರೂಣ ಹತ್ಯೆ ಹಾಗೂ ಭ್ರೂಣ ಲಿಂಗ ಪತ್ತೆ ಕಾನೂನಿಗೆ ವಿರುದ್ಧ ಹಾಗೂ ಶಿಕ್ಷಾರ್ಹ ಅಪರಾಧ. ಇದರಿಂದ ಸ್ತ್ರೀ, ಪುರುಷರ ಸಂಖ್ಯೆಯಲ್ಲಿ ವ್ಯತ್ಯಾಸವಾಗಿ ಸಮಾಜಕ್ಕೆ ಮಾರಕವಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.ಕಾರ್ಯಾಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಕೆ. ಅಮೃತ, ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜ್ ಮಾತನಾಡಿದರು. ಕಾರ್ಯಾಗಾರದಲ್ಲಿ ಗ್ರಾಪಂ ಉಪಾಧ್ಯಕ್ಷೆ ನಾಗರತ್ನ , ಪಿಡಿಒ ಪ್ರಶಾಂತ ಬಾಬು, ಸದಸ್ಯರಾದ ಶ್ರೀನಿವಾಸ, ತಾ.ಪಂ ಮಾಜಿ ಸದಸ್ಯ ಸಂದೇಶ, ತಾಲೂಕು ಪ್ರಭಾರಿ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬಿ. ಮಂಗಳಾ, ಮುಖಂಡರಾದ ಜಗದೀಶ್, ಹಾಲಿನ ಡೈರಿ ಕಾರ್ಯದರ್ಶಿ ಯಶವಂತ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಇತರರು ಇದ್ದರು.