ಸಹಕಾರ ಕ್ಷೇತ್ರದ ಕಾನೂನುಗಳ ಅರಿವು ತುಂಬಾ ಅಗತ್ಯ: ಎಚ್.ವಿ.ನಾಗರಾಜ್

| Published : Aug 22 2024, 12:58 AM IST

ಸಹಕಾರ ಕ್ಷೇತ್ರದ ಕಾನೂನುಗಳ ಅರಿವು ತುಂಬಾ ಅಗತ್ಯ: ಎಚ್.ವಿ.ನಾಗರಾಜ್
Share this Article
  • FB
  • TW
  • Linkdin
  • Email

ಸಾರಾಂಶ

ಸಹಕಾರ ಸಂಘದ ವ್ಯಾಪ್ತಿ ದೊಡ್ಡದಾಗಿದ್ದು, ಇಲಾಖೆಯಲ್ಲಿ ಸಾಕಷ್ಟು ಬದಲಾವಣೆಗಳು ಕಂಡಿವೆ. ವಿಶೇಷವಾಗಿ ಸಹಕಾರ ಸಂಘಗಳ ಬೈಲಾಗಳಲ್ಲಿ ಕೂಡ ಅನೇಕ ಬದಲಾವಣೆಗಳನ್ನು ತಂದಿರುವುದರಿಂದ ಅವುಗಳ ಅರಿವು ಸಹಕಾರ ಸಂಘಗಳಲ್ಲಿ ಕೆಲಸ ಮಾಡುವ ನೌಕರರಿಗೆ ಇರಬೇಕಾಗುತ್ತದೆ.

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

ಸಹಕಾರ ಇಲಾಖೆಯಲ್ಲಿ ಕಾಲಕಾಲಕ್ಕೆ ತಿದ್ದುಪಡಿ ಆಗಿರುವ ಕಾನೂನುಗಳ ಬಗ್ಗೆ ಸಹಕಾರ ಸಂಘಗಳಲ್ಲಿ ಕೆಲಸ ಮಾಡುವ ಅಧಿಕಾರಿ, ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿದರೆ ಸಂಘಗಳನ್ನು ವ್ಯವಸ್ಥಿತವಾಗಿ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗುತ್ತದೆಯೆಂದು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ವಿ.ನಾಗರಾಜ್ ತಿಳಿಸಿದರು.

ನಗರದ ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಶಿಬಿರ ಕಚೇರಿಯಲ್ಲಿ ಬುಧವಾರ ರಾಜ್ಯ ಸಹಕಾರ ಮಹಾ ಮಂಡಲ, ಜಿಲ್ಲಾ ಸಹಕಾರ ಒಕ್ಕೂಟ, ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಹಾಗೂ ಸಹಕಾರ ಇಲಾಖೆ ಸಹಯೋಗದೊಂದಿಗೆ ತಾಲೂಕಿನ ಹಾಲು ಡೈರಿ ಕಾರ್ಯದರ್ಶಿಗಳಿಗೆ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಸಹಕಾರ ಸಂಘದ ವ್ಯಾಪ್ತಿ ದೊಡ್ಡದಾಗಿದ್ದು, ಇಲಾಖೆಯಲ್ಲಿ ಸಾಕಷ್ಟು ಬದಲಾವಣೆಗಳು ಕಂಡಿವೆ. ವಿಶೇಷವಾಗಿ ಸಹಕಾರ ಸಂಘಗಳ ಬೈಲಾಗಳಲ್ಲಿ ಕೂಡ ಅನೇಕ ಬದಲಾವಣೆಗಳನ್ನು ತಂದಿರುವುದರಿಂದ ಅವುಗಳ ಅರಿವು ಸಹಕಾರ ಸಂಘಗಳಲ್ಲಿ ಕೆಲಸ ಮಾಡುವ ನೌಕರರಿಗೆ ಇರಬೇಕಾಗುತ್ತದೆ. ಇದರಿಂದ ಮುಂದಿನ ದಿನಗಳಲ್ಲಿ ಸಹಕಾರ ಸಂಘಗಳ ಚುನಾವಣೆ ಸೇರಿದಂತೆ ಸಭೆ, ಸಮಾರಂಭಗಳನ್ನು ಸುಲಲಿತವಾಗಿ ನಡೆಸಿಕೊಂಡು ಹೋಗಬಹುದೆಂದರು.

ಅಧ್ಯಕ್ಷತೆ ವಹಿಸಿದ್ದ ಪಿಕಾರ್ಡ್ ಬ್ಯಾಂಕಿನ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಕೆ.ಎಂ.ಭೀಮೇಶ್ ಮಾತನಾಡಿ, ಡೈರಿಗಳಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿವೆ. ಅವುಗಳನ್ನು ತಡೆಯಬೇಕಾದರೆ ಡೈರಿ ಕಾರ್ಯದರ್ಶಿಗಳು ಇದರ ಬಗ್ಗೆ ಗಮನ ಹರಿಸಬೇಕೆಂದರು. ಸಹಕಾರ ಸಂಘಗಳು ಪಾರದರ್ಶಕವಾಗಿ ನಡೆಯಬೇಕಾದರೆ ತರಬೇತಿ ಬಹಳ ಮುಖ್ಯವೆಂದರು.

ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ನಿರ್ದೇಶಕ ಆರ್.ಶ್ರೀನಿವಾಸ್ , ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ಗುಡಿಯಪ್ಪ, ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಡಾಲ್ಪಿನ್ ನಾಗರಾಜ್, ಸಂಪನ್ನೂಲ ವ್ಯಕ್ತಿ ಎಚ್.ಎಸ್.ನಾಗರಾಜಯ್ಯ, ಸಹಕಾರ ಸಂಘಗಳ ಲೆಕ್ಕಪರಿಶೋಧನ ಇಲಾಖೆ ಉಪ ನಿರ್ದೇಶಕ ವೇಣು, ಕೋಚಿಮುಲ್ ಶಿಬಿರ ಕಚೇರಿ ವ್ಯವಸ್ಥಾಪಕ ಎಂ.ಪಿ.ಚೇತನ್ ಸೇರಿ ಕೋಚಿಮುಲ್ ನ ವಿಸ್ತಾರಣಾಧಿಕಾರಿಗಳು, ಡೈರಿ ಕಾರ್ಯದರ್ಶಿಗಳು ಮತ್ತಿತರರು ಇದ್ದರು.