ಸೈಬರ್‌ ಅಪರಾಧಗಳ ಜಾಗೃತಿ ಅಗತ್ಯ: ಕೃಷ್ಣಪ್ಪ

| Published : Oct 26 2024, 12:46 AM IST

ಸಾರಾಂಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಇಲ್ಲಿನ ಸರಸ್ವತಿ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಅಪಘಾತಗಳ ನಿಯಂತ್ರಣ ಮತ್ತು ಸೈಬರ್ ಅಪರಾಧದಿಂದ ಹಣ ವಂಚನೆ ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಕುರಿತಾಗಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಇಲ್ಲಿನ ಸರಸ್ವತಿ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಅಪಘಾತಗಳ ನಿಯಂತ್ರಣ ಮತ್ತು ಸೈಬರ್ ಅಪರಾಧದಿಂದ ಹಣ ವಂಚನೆ ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಕುರಿತಾಗಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ನಗರ ಠಾಣೆ ಆರಕ್ಷಕ ಉಪನಿರೀಕ್ಷಕ ಕೃಷ್ಣಪ್ಪ ಮಾತನಾಡಿ, 18 ವರ್ಷದೊಳಗಿನ ವಿದ್ಯಾರ್ಥಿಗಳು ವಾಹನ ಚಾಲನೆ ಮಾಡುವುದು ಅಪರಾಧ. ವಾಹನ ಚಾಲಕರು ಕಡ್ಡಾಯವಾಗಿ ಡ್ರೈವಿಂಗ್ ಲೈಸೆನ್ಸ್ ಹೊಂದಿರಲೇಬೇಕು. ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಅಲ್ಲದೆ ಯಾವುದೇ ಕಾರಣಕ್ಕೂ ತ್ರಿಬಲ್ ರೈಡಿಂಗ್ ಮಾಡಬಾರದು. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದರೆ ಹತ್ತು ಸಾವಿರ ರುಪಾಯಿಗಳ ದಂಡ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದರು.

ಇತ್ತೀಚಿಗೆ ನಗದು ಹಣ ವ್ಯವಹಾರ ಕಡಿಮೆಯಾಗಿ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಪೋಷಕರು ತಮ್ಮ ವೈಯಕ್ತಿಕ ಖಾತೆ ಸಂಖ್ಯೆ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಸಿವಿಸಿ, ಓಟಿಪಿ ಸಂಖ್ಯೆಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳದಂತೆ ಪೋಷಕರಿಗೆ ತಿಳಿಸಲು ವಿದ್ಯಾರ್ಥಿಗಳಿಗೆ ತಿಳಿಸಿದರು.

ಸೈಬರ್ ಅಪರಾಧಿಗಳು ತಮ್ಮ ಗ್ಯಾಂಗ್‌ನೊಂದಿಗೆ ಹಣ ದೋಚಲು ನಿಮಗೆ ಪಾರ್ಸಲ್ ಬಂದಿದೆ ನಿಮಗೆ ಬಹುಮಾನ ಬಂದಿದೆ ಇಷ್ಟು ಹಣ ಕಟ್ಟಬೇಕು ಎಂದು ಸುಳ್ಳು ಹೇಳಿ ಹಣ ದೋಚುತ್ತಾರೆ ಇದರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಬಿ.ಕೆ ಸಂಪತ್ ಕುಮಾರ್, ಪೊಲೀಸ್ ಸಿಬ್ಬಂದಿ ಬಸವರಾಜು ಮತ್ತಿತರರು ಭಾಗವಹಿಸಿದ್ದರು.

25ಕೆಡಿಬಿಪಿ1-

ದೊಡ್ಡಬಳ್ಳಾಪುರದ ಸರಸ್ವತಿ ಶಾಲೆಯಲ್ಲಿ ರಸ್ತೆ ಅಪಘಾತ ಹಾಗೂ ಸೈಬರ್‌ ಅಪರಾಧಗಳ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.