ಸಾರಾಂಶ
ದೊಡ್ಡಬಳ್ಳಾಪುರ: ತಾಲೂಕಿನ ತೋಟಗಾರಿಕಾ ಕ್ಷೇತ್ರದಲ್ಲಿ ಜಿಪಂ ಹಾಗೂ ತೋಟಗಾರಿಕೆ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ ನರ್ಸರಿ ಅಭಿವೃದ್ಧಿಪಡಿಸುವ ಕುರಿತು ಮಂಗಳವಾರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ದೊಡ್ಡಬಳ್ಳಾಪುರ: ತಾಲೂಕಿನ ತೋಟಗಾರಿಕಾ ಕ್ಷೇತ್ರದಲ್ಲಿ ಜಿಪಂ ಹಾಗೂ ತೋಟಗಾರಿಕೆ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ ನರ್ಸರಿ ಅಭಿವೃದ್ಧಿಪಡಿಸುವ ಕುರಿತು ಮಂಗಳವಾರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಬೆಂ.ಗ್ರಾ. ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್ ಕಾರ್ಯಾಗಾರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ತೋಟಗಾರಿಕೆ ವಲಯದಲ್ಲಿ ವಿವಿಧ ಬಗೆಯ ಆವಿಷ್ಕಾರಗಳನ್ನು ಕಾಣಲಾಗುತ್ತಿದ್ದು, ವಿನೂತನ ಪ್ರಯೋಗಗಳಿಗೆ ಪೂರಕ ವಾತಾವರಣ ಕಲ್ಪಿಸಿಕೊಡುವುದು ಅಗತ್ಯವಾಗಿದೆ. ಯುವ ಕೃಷಿಕರು, ತೋಟಗಾರಿಕೆ ವಲಯದಲ್ಲಿ ಆಸಕ್ತಿ ಹೊಂದಿರುವವರ ಭಿನ್ನ ಆಲೋಚನೆಗಳಿಗೆ ಪೂರಕವಾಗಿ ಇರುವ ಅವಕಾಶಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ತಿಳಿಸಿದರು.ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ವ್ಯವಸ್ಥಿತವಾಗಿ ವಿವಿಧ ಬಗೆಯ ಸಸಿಗಳನ್ನು ಬೆಳೆಸುವ, ಹಣ್ಣು, ತರಕಾರಿ, ಅಲಂಕಾರಿಕ ಸಸ್ಯಗಳು, ಬೊನ್ಸಾಯಿ ಸೇರಿದಂತೆ ಭಿನ್ನ ಮಾದರಿಯ ಸಸ್ಯ ಸಂಕುಲವನ್ನು ಪರಿಸರಾಸಕ್ತರ ನಿರೀಕ್ಷೆಗಳಿಗೆ ಪೂರಕವಾಗಿ ಬೆಳೆಸಿ, ಸಾರ್ವಜನಿಕರಿಗೆ ತಲುಪಿಸುವ ಉದ್ದೇಶವನ್ನು ಇಲಾಖೆ ಹೊಂದಿದ್ದು, ಈ ಹಂತದಲ್ಲಿ ವ್ಯವಸ್ಥಿತವಾಗಿ ಕಾರ್ಯೋನ್ಮುಖರಾಗಿರುವುದಾಗಿ ತಿಳಿಸಿದರು.
ಕಾರ್ಯಾಗಾರದಲ್ಲಿ ಬೆಂ.ಗ್ರಾ. ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೆ.ಗುಣವಂತ, ತಾಪಂ ಕಾರ್ಯನಿರ್ವಹಣಾಧಿಕಾರಿ ಎನ್.ಮುನಿರಾಜು,ರೇಷ್ಮೆ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.ತೋಟಗಾರಿಕೆ ವಿಜ್ಞಾನಿಗಳಿಂದ ತರಬೇತಿ:
ಇದೇ ವೇಳೆ ಆಸಕ್ತ ಕೃಷಿಕರಿಗೆ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ.ಜಗದೀಶ್, ಬಿ.ಚುಂಚಯ್ಯ ಹಾಗೂ ಹರ್ಷವರ್ಧನ್ ಹಾಗೂ ವಿವಿಧ ಇಲಾಖೆಗಳ ಉಪನಿರ್ದೇಶಕರು ವಿಷಯವಾರು ತರಬೇತಿ ನೀಡಿದರು. ಈ ಕಾರ್ಯಾಗಾರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ನರ್ಸರಿ ಅಭಿವೃದ್ಧಿ ಪಡಿಸುವ ಸ್ವಸಹಾಯ ಸಂಘಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಭಾಗವಹಿಸಿದ್ದರು.(ಈ ಒಂದು ಫೋಟೋ ಮಾತ್ರ ಬಳಸಿ)28ಕೆಡಿಬಿಪಿ2- ದೊಡ್ಡಬಳ್ಳಾಪುರದಲ್ಲಿ ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರಕ್ಕೆ ಬೆಂ.ಗ್ರಾ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಚಾಲನೆ ನೀಡಿದರು.( ಈ ಫೋಟೋ ಬೇಡ)
28ಕೆಡಿಬಿಪಿ3- ದೊಡ್ಡಬಳ್ಳಾಪುರದಲ್ಲಿ ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ನಡೆದ ಕಾರ್ಯಾಗಾರದಲ್ಲಿ ವಿಜ್ಞಾನಿಗಳು ರೈತರಿಗೆ ಮಾರ್ಗದರ್ಶನ ನೀಡಿದರು.