ಮನ-ಮನೆಯಲ್ಲಿ ಸಂವಿಧಾನದ ಜಾಗೃತಿ ಮೂಡಬೇಕು: ಜಿಲ್ಲಾಧಿಕಾರಿ ಗಂಗೂಬಾಯಿ

| Published : Feb 10 2024, 01:46 AM IST

ಮನ-ಮನೆಯಲ್ಲಿ ಸಂವಿಧಾನದ ಜಾಗೃತಿ ಮೂಡಬೇಕು: ಜಿಲ್ಲಾಧಿಕಾರಿ ಗಂಗೂಬಾಯಿ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಜ. 26ರಿಂದ ಆರಂಭಗೊಂಡಿದ್ದು, 229 ಗ್ರಾಪಂಗಳಲ್ಲಿ ಜಾಥಾ ಸಂಚರಿಸಲಿದೆ. ಇದುವರೆಗೆ ಒಟ್ಟೂ115ಕ್ಕೂ ಹೆಚ್ಚು ಗ್ರಾಮಗಳಲ್ಲಿ ಜಾಥಾ ಕಾರ್ಯಕ್ರಮ ಆಯೋಜಿಸಿ, ಸಂವಿಧಾನದ ಮಹತ್ವದ ಕುರಿತು ಅರಿವು ಮತ್ತು ಜಾಗೃತಿ ಮೂಡಿಸಲಾಗಿದೆ.

ಕಾರವಾರ:

ಎಲ್ಲರ ಮನ, ಮನೆಗಳಲ್ಲಿ ಸಂವಿಧಾನದ ಜಾಗೃತಿ ಮೂಡಬೇಕು. ಭಾರತ ಸಂವಿಧಾನವು ನಮ್ಮ ಹೆಮ್ಮೆಯ, ಗೌರವದ ಸಂವಿಧಾನವಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ್ದು, ವಿಶ್ವದ ಅತ್ಯಂತ ಬೃಹತ್ ಲಿಖಿತ, ವಿಶ್ವದಲ್ಲಿಯೇ ಅತೀ ಉತ್ತಮವಾದ ಸಂವಿಧಾನ ಹೊಂದಿರುವ ನಾವು, ಸಂವಿಧಾನದ ಮೂಲ ತತ್ವಗಳನ್ನು ಸಂಪೂರ್ಣವಾಗಿ ತಿಳಿದು, ಅವುಗಳನ್ನು ಪ್ರತಿಯೊಬ್ಬರ ಮನೆ, ಮನಗಳಲ್ಲಿ ಅಳವಡಿಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದಿದ್ದಾರೆ.

ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಜ. 26ರಿಂದ ಆರಂಭಗೊಂಡಿದ್ದು, 229 ಗ್ರಾಪಂಗಳಲ್ಲಿ ಜಾಥಾ ಸಂಚರಿಸಲಿದೆ. ಇದುವರೆಗೆ ಒಟ್ಟೂ115ಕ್ಕೂ ಹೆಚ್ಚು ಗ್ರಾಮಗಳಲ್ಲಿ ಜಾಥಾ ಕಾರ್ಯಕ್ರಮ ಆಯೋಜಿಸಿ, ಸಂವಿಧಾನದ ಮಹತ್ವದ ಕುರಿತು ಅರಿವು ಮತ್ತು ಜಾಗೃತಿ ಮೂಡಿಸಲಾಗಿದೆ. ಜಾಥಾದಲ್ಲಿ ಸ್ತಬ್ಧಚಿತ್ರ, ಆಕರ್ಷಕ ಮೆರವಣಿಗೆ, ಬೈಕ್ ಮತ್ತು ಸೈಕಲ್ ರ‍್ಯಾಲಿ, ಯಕ್ಷಗಾನ ಪ್ರದರ್ಶನ, ಡಮಾಮಿ ನೃತ್ಯ, ವಿದ್ಯಾರ್ಥಿಗಳಿಂದ ನೃತ್ಯ ರೂಪಕ, ಭಾಷಣ ಸ್ಪರ್ಧೆ, ಸಂವಿಧಾನ ಪೀಠಿಕೆಯ ಬೋಧನೆ, ಪ್ರತಿಜ್ಞಾ ವಚನ ಸ್ವೀಕಾರ ಸೇರಿದಂತೆ ಹಲವು ವೈವಿಧ್ಯಮಯ ಚಟುಚಟಿಕೆಗಳನ್ನು ನಿರತಂತರವಾಗಿ ನಡೆಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

ನಮ್ಮ ಸಂವಿಧಾನ ನಮಗೆ ನೀಡಿರುವ ಹಕ್ಕು ಮತ್ತು ಕರ್ತವ್ಯಗಳನ್ನು ಪ್ರತಿಯೊಬ್ಬ ನಾಗರೀಕರು ಅರಿತು ಈ ಬಗ್ಗೆ ಸದಾ ಜಾಗೃತಿ ಹೊಂದಬೇಕು. ಪ್ರಸ್ತುತ ರಾಜ್ಯ ಸರ್ಕಾರ ಸಂವಿಧಾನ ಜಾಗೃತಿ ಕುರಿತು ಜಾಥಾವನ್ನು ರಾಜ್ಯಾದ್ಯಂತ ಆಯೋಜಿಸಿದ್ದು, ನಮ್ಮ ಜಿಲ್ಲೆಯಲ್ಲಿಯೂ ಸಹ ಈಗಾಗಲೇ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲೆಯ ಪ್ರತಿಯೊಂದು ಗ್ರಾಮಗಳಿಗೂ ಸಂಚರಿಸುವ ಈ ಜಾಥಾದ ಮೂಲಕ ಜಿಲ್ಲೆಯ ಪ್ರತಿಯೊಂದು ಮನೆ ಮತ್ತು ಪ್ರತಿ ಸಾರ್ವಜನಿಕರ ಮನಗಳಲ್ಲಿ ಸಂವಿಧಾನದ ಮಹತ್ವದ ಕುರಿತು ವ್ಯಾಪಕ ಅರಿವು ಮೂಡಿಸಲಾಗುತ್ತಿದೆ. ಸಂವಿಧಾನ ನೀಡಿರುವ ಹಕ್ಕುಗಳಿಗೆ ಯಾವುದೇ ಚ್ಯುತಿ ಬಂದಲ್ಲಿ ಯಾವುದೇ ವ್ಯಕ್ತಿ ಅವುಗಳಿಗೆ ಕಾನೂನಿನ ರಕ್ಷಣೆ ಕೂಡ ಪಡೆಯಬಹುದಾಗಿದೆ. ದಿನ ನಿತ್ಯದ ಜೀವನದಲ್ಲಿ ಪ್ರತಿಯೊಬ್ಬರಿಗೂ ಈ ಹಕ್ಕುಗಳು ನೆರವು ನೀಡಲಿವೆ ಎಂದರು.ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಿ ಇನ್ನು ಹೆಚ್ಚಿನ ಅರಿವು ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.