ಮಾದಕ ವಸ್ತುಗಳ ದುಷ್ಪರಿಣಾಮದ ಅರಿವು ಅಗತ್ಯ

| Published : Jun 27 2024, 01:05 AM IST

ಸಾರಾಂಶ

ದೊಡ್ಡಬಳ್ಳಾಪುರ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ನಗರ ಪೊಲೀಸ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧದ ಅಂತಾರಾಷ್ಟ್ರೀಯ ದಿನದ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ದೊಡ್ಡಬಳ್ಳಾಪುರ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ನಗರ ಪೊಲೀಸ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣಿಕೆ ವಿರುದ್ಧದ ಅಂತಾರಾಷ್ಟ್ರೀಯ ದಿನದ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆ ಮತ್ತು ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಸಾಧಿಕ್ ಪಾಷಾ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಅರಿವು ಅಗತ್ಯ. ಇಂದು ಹಲವು ಹೊರಗಿನ ಪ್ರಭಾವಗಳು ವಿದ್ಯಾರ್ಥಿಗಳನ್ನು ಪ್ರೇರೇಪಿಸಿ ಸಾಮಾಜಿಕ ಕಾಳಜಿಗೆ ಧಕ್ಕೆ ತರುವ ಯತ್ನಗಳು ನಡೆಯುತ್ತಿದ್ದು, ಅವುಗಳನ್ನು ನಿಗ್ರಹಿಸುವ ಅಗತ್ಯವಿದೆ ಎಂದರು.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ರೇವಣ್ಣ, ಟೌನ್ ಸಬ್ ಇನ್ಸ್ಪೆಕ್ಟರ್ ದಯಾನಂದ್ ಮತ್ತಿತರರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಸ್‌.ಜಂಬಗಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಟಿ.ಆರ್.ಶ್ರೀರಾಮಗೌಡ, ಮಂಗಳಗೌರಿ ಮತ್ತಿತರರು ಉಪಸ್ಥಿತರಿದ್ದರು.

26ಕೆಡಿಬಿಪಿ2- ದೊಡ್ಡಬಳ್ಳಾಪುರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಮಾದಕ ವಸ್ತುಗಳ ದುಷ್ಟರಿಣಾಮ ಕುರಿತ ಅರಿವು ಕಾರ್ಯಕ್ರಮ ನಡೆಯಿತು.