ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

| Published : Jul 27 2024, 12:47 AM IST

ಸಾರಾಂಶ

Awareness on Prohibition of Child Marriage

ಚಿತ್ರದುರ್ಗ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ, ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಹಾಗೂ ಸಹಯೋಗದಲ್ಲಿ ಬಾಲ್ಯ ವಿವಾಹದ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಕ್ಕಳ ಸಹಾಯವಾಣಿ ಹಾಗೂ ಬಾಲ್ಯ ವಿವಾಹ ಕುರಿತಾದ ಕರಪತ್ರ ಹಂಚುವುದರೊಂದಿಗೆ ಬಾಲ್ಯ ವಿವಾಹ ತಡೆ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ದೀಪಾ, ಉಪಾಧ್ಯಕ್ಷ ಆರ್.ತಿಪ್ಪೇಸ್ವಾಮಿ, ಗ್ರಾಪಂ ಸದಸ್ಯ ಡಿ.ಆರ್.ಮಂಜುನಾಥ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೀತಾ, ಪಿಡಿಓ ಖಲೀಂ ಇದ್ದರು.

--------

ಫೋಟೋ: 26 ಸಿಟಿಡಿ2