ಇಂದು ಸಂವಿಧಾನ ಹಕ್ಕುಗಳ ಜಾಗೃತಿ ಕಾರ್ಯಕ್ರಮ

| Published : Feb 27 2025, 02:01 AM IST

ಇಂದು ಸಂವಿಧಾನ ಹಕ್ಕುಗಳ ಜಾಗೃತಿ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಶಿವಮೊಗ್ಗ: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಫೆ.27 ರಂದು ಸಂಜೆ 4 ಗಂಟೆಗೆ ಮಾನವ ಹಕ್ಕುಗಳ ಮತ್ತು ಸಂವಿಧಾನ ಹಕ್ಕುಗಳ ಜಾಗೃತಿ ಕಾರ್ಯಕ್ರಮವನ್ನು ಭದ್ರಾವತಿಯ ನ್ಯೂಟೌನ್ ಪೋಲಿಸ್ ಠಾಣೆಯ ಬಳಿಯಿರುವ ರೋಟರಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಬಿ.ಎನ್.ರಾಜು ತಿಳಿಸಿದರು.

ಶಿವಮೊಗ್ಗ: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಫೆ.27 ರಂದು ಸಂಜೆ 4 ಗಂಟೆಗೆ ಮಾನವ ಹಕ್ಕುಗಳ ಮತ್ತು ಸಂವಿಧಾನ ಹಕ್ಕುಗಳ ಜಾಗೃತಿ ಕಾರ್ಯಕ್ರಮವನ್ನು ಭದ್ರಾವತಿಯ ನ್ಯೂಟೌನ್ ಪೋಲಿಸ್ ಠಾಣೆಯ ಬಳಿಯಿರುವ ರೋಟರಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಬಿ.ಎನ್.ರಾಜು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗಗಳು ಸಂವಿಧಾನ ನಿರ್ಲಕ್ಷಿಸುತ್ತಿವೆ. ಸಾರ್ವಜನಿಕರಿಗೆ ಸಂವಿಧಾನದ ಬಗ್ಗೆ ಪೂರ್ಣ ಮಾಹಿತಿ ಇಲ್ಲ. ಈ ಹಿನ್ನಲೆಯಲ್ಲಿ ಮಾನವ ಹಕ್ಕುಗಳ ಮತ್ತು ಸಂವಿಧಾನ ಹಕ್ಕುಗಳ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದರು.ಅಂದು ಸಂಜೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಸಿಪಿಐ ರಾಜ್ಯ ಮಂಡಳಿ ಸದಸ್ಯ ಹಾಗೂ ಹಿರಿಯ ಕಾರ್ಮಿಕ ಮುಖಂಡ ಡಿ.ಸಿ.ಮಾಯಣ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎನ್.ರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ ಎಂ.ವಿ. ಕಾಲೇಜು ಭದ್ರಾವತಿಯ ನಿವೃತ್ತ ಪ್ರಾಧ್ಯಾಪಕ ಎಂ.ಚಂದ್ರಶೇಖರ್, ಮಾನವ ಹಕ್ಕುಗಳು ಹಾಗೂ ಸಂವಿಧಾನದ ಕುರಿತಾಗಿ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.ಸಂವಿಧಾನ ಎಂದರೆ ಕಾನೂನುಗಳ ಸಮ್ಮಿಲನ. ಶಾಸಕಾಂಗ ಕಾಯಾಂಗ ನ್ಯಾಯಾಂಗದಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಸಹ ಸಂವಿಧಾನದ ಬಗ್ಗೆ ಪೂರ್ಣವಾಗಿ ತಿಳಿದುಕೊಂಡಿರಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ, ಇ -ಸ್ವತ್ತು ಯೋಜನೆ ಸೇರಿದಂತೆ ಅನೇಕ ಸೌಲಭ್ಯಗಳ ಮಾಹಿತಿಯ ಬಗ್ಗೆ ಹಾಗೂ ಕಾನೂನಿನ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸಲು ಫೆ.೨೭ ರಿಂದ ಏಪ್ರಿಲ್ ತಿಂಗಳ ಅಂತ್ಯದವರೆಗೂ ೨ ತಿಂಗಳು ಹಲವು ಶಾಲಾ ಕಾಲೇಜುಗಳಲ್ಲಿ ಮತ್ತು ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದೇವೆ. ನಂತರ ಏಪ್ರಿಲ್ ತಿಂಗಳ ಕೊನೆಯ ವಾರದಲ್ಲಿ ಶಿವಮೊಗ್ಗದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಾನವ ಹಕ್ಕುಗಳ ಮತ್ತು ಸಂವಿಧಾನ, ಹಕ್ಕುಗಳ ಜಾಗೃತಿಗಾಗಿ ವಿಶ್ವ ಮಾನವ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಏಪ್ರಿಲ್ ತಿಂಗಳಿನಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ನೆರವೇರಿಸಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಅರುಣ್ ಕುಮಾರ್, ಅಕ್ರಮ್ ಖಾನ್, ಬ್ರಹ್ಮ ಲಿಂಗಯ್ಯ, ಶ್ರೀನಿವಾಸ್, ಈರೇಶ್, ಅಜಿತ್, ಮನೋಜ್ ಇದ್ದರು.