ಕುಂಜಿಲ ಗ್ರಾಮದಲ್ಲಿ ಡೆಂಘಿ, ಇಲಿ ಜ್ವರದ ಕುರಿತು ಜಾಗೃತಿ ಕಾರ್ಯಕ್ರಮ

| Published : Sep 01 2025, 01:04 AM IST

ಕುಂಜಿಲ ಗ್ರಾಮದಲ್ಲಿ ಡೆಂಘಿ, ಇಲಿ ಜ್ವರದ ಕುರಿತು ಜಾಗೃತಿ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿಯ ಗ್ರಾಮದಲ್ಲಿ ಡೆಂಘಿ, ಇಲಿಜ್ವರ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕನ್ನಡಪ್ರಬ ವಾರ್ತೆ ನಾಪೋಕ್ಲು

ಇಲ್ಲಿಗೆ ಸಮೀಪದ ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿಯ ಗ್ರಾಮದಲ್ಲಿ ಡೆಂಘಿ, ಇಲಿ ಜ್ವರ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇಟ್ಟುಕೊಂಡರೆ ಡೆಂಘಿ, ಇಲಿ ಜ್ವರ ಸೇರಿದಂತೆ ಯಾವುದೇ ಸಾಂಕ್ರಾಮಿಕ ರೋಗಗಳು ಬರುವುದಿಲ್ಲ ಎಂದು ಜಿಲ್ಲಾ ಎಂಟಮಾಲಿಜಿಸ್ಟ್ ಮಂಜುನಾಥ್ ಅವರು ಸಾರ್ವಜನಿಕರಿಗೆ ಆರೋಗ್ಯ ಮಾಹಿತಿ ನೀಡಿ ಯಾವುದೇ ಜ್ವರವಿರಲಿ ಹತ್ತಿರದ ಆಸ್ಪತ್ರೆ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು.

ಪ್ರತಿ ಮನೆಯ ಮುಂದಿನ ಚರಂಡಿಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಮನೆಯ ಒಳಗೆ ಮತ್ತು ಹೊರಗೆ ನೀರು ತುಂಬಿಸುವ ತಾಣಗಳು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ಮುಚ್ಚಳದಿಂದ ಮುಚ್ಚಬೇಕು. ಸೊಳ್ಳೆಗಳ ನಿಯಂತ್ರಣಕ್ಕಾಗಿ ಸೊಳ್ಳೆ ನಾಶಕ ಮತ್ತು ಸೊಳ್ಳೆ ಪರದೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಜನರಿಗೆ ಮಾಹಿತಿ ನೀಡಿದರು. ಮಡಿಕೇರಿ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ಅವರು ಡೆಂಘಿ ಮತ್ತು ಇಲಿ ಜ್ವರ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ನೀಡಿ, ಮನೆಯ ಸುತ್ತಮುತ್ತ ಸ್ವಚ್ಛ ಪರಿಸರ, ಶುದ್ಧ ನೀರು ಇರುವಂತೆ ನೋಡಿಕೊಳ್ಳಬೇಕು ಹಾಗೂ ಚರಂಡಿಗಳಲ್ಲಿ ನೀರು ನಿಲ್ಲದಂತೆ ಮತ್ತು ಲಾರ್ವಾ ಉತ್ಪತ್ತಿ ಆಗದಂತೆ ಎಚ್ಚರ ವಹಿಸಲು ತಿಳಿಸಿದರು. ಬರಿಗಾಲಿನಲ್ಲಿ ಓಡಾಡದಂತೆ ತಿಳಿಸಿ ಪಾದರಕ್ಷೆಗಳನ್ನು ಬಳಸುವುದು ಮತ್ತು ಸ್ವಚ್ಛತೆ ಕಾಪಾಡಿ ಮುಂಜಾಗ್ರತೆ ವಹಿಸುವ ಅಗತ್ಯವಿದೆ. ಇದರಿಂದ ಡೆಂಘಿ, ಇಲಿ ಜ್ವರ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮಾಡಬಹುದು ಎಂದು ತಿಳಿಸಿದರು. ಕುಂಜಿಲ ಗ್ರಾಮದಲ್ಲಿ ಮನೆ ಮನೆ ಜ್ವರ ಸಮೀಕ್ಷೆ ನಡೆಸಿ ಜನರಿಗೆ ತಿಳುವಳಿಕೆ ನೀಡಲಾಯಿತು. ರೋಗಗಳು ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿ.ವೈ.ಅಶೋಕ ಕುಮಾರ್ ಇವರೊಂದಿಗೆ ಚರ್ಚಿಸಿ ಸಹಕಾರ ನೀಡುವಂತೆ ತಿಳಿಸಲಾಯಿತು. ಸಮುದಾಯ ಅಧಿಕಾರಿ ಚೈತ್ರ, ಹೇಮಂತ್, ಆಶಾ ಕಾರ್ಯಕರ್ತೆ ಬೇಬಿ ಎನ್ನಿತರರು ಇದ್ದರು.

---------------------------------

28-ಎನ್ ಪಿ ಕೆ-3.ನಾಪೋಕ್ಲು ಸಮೀಪದ ಕುಂಜಿಲ ಕಕ್ಕಬೆ ಗ್ರಾಮ ಪಂಚಾಯಿತಿಯ ಗ್ರಾಮದಲ್ಲಿ ಡೆಂಗ್ಯೂ, ಇಲಿ ಜ್ವರ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. =========================================================.