ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ , ಬೆಂಗಳೂರಿನ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಹಾಗೂ ಇಲ್ಲಿನ ಬೈಲೂರಿನ ಶ್ರೀ ವಿನಾಯಕ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟಗಳ ಸಹಯೋಗದಲ್ಲಿ ಬೈಲೂರು ಗ್ರಾಪಂನಲ್ಲಿ ಮಳೆನೀರು ಕೊಯ್ಲು, ತ್ಯಾಜ್ಯ ನಿರ್ವಹಣೆ ಹಾಗೂ ನವೀಕರಿಸಬಹುದಾದ ಇಂಧನ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ , ಬೆಂಗಳೂರಿನ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಹಾಗೂ ಇಲ್ಲಿನ ಬೈಲೂರಿನ ಶ್ರೀ ವಿನಾಯಕ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟಗಳ ಸಹಯೋಗದಲ್ಲಿ ಬೈಲೂರು ಗ್ರಾಪಂನಲ್ಲಿ ಮಳೆನೀರು ಕೊಯ್ಲು, ತ್ಯಾಜ್ಯ ನಿರ್ವಹಣೆ ಹಾಗೂ ನವೀಕರಿಸಬಹುದಾದ ಇಂಧನ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಒಕ್ಕೂಟದ ಅಧ್ಯಕ್ಷೆ ಶಾಲಿನಿ ಸುಕೇಶ್ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯದರ್ಶಿ ಸರೋಜಾ ಉಪಸ್ಥಿತರಿದ್ದರು.ಸಂಪನ್ಮೂಲ ವ್ಯಕ್ತಿಗಳಾದ ಜೋಸೆಫ್ ರೆಬೆಲ್ಲೊ ಅವರು ಮಳೆನೀರು ಕೊಯ್ಲು ಹಾಗೂ ತ್ಯಾಜ್ಯ ನಿರ್ವಹಣೆ ಕುರಿತು, ಎಂಜಿಐಆರ್‌ಇಡಿ ಸಂಸ್ಥೆಯ ಹಿರಿಯ ಉಪನ್ಯಾಸಕ ಮಂಜುನಾಥ್ ಅವರು ತ್ಯಾಜ್ಯ ನಿರ್ವಹಣೆಯ ವಿವಿಧ ವಿಧಾನಗಳು ಹಾಗೂ ಅದರ ಮಹತ್ವದ ಕುರಿತು, ಅರುಣ್ ಪಟವರ್ಧನ್ ಅವರು ನವೀಕರಿಸಬಹುದಾದ ಇಂಧನದ ಬಳಕೆ, ಅದರ ಪ್ರಯೋಜನಗಳು ಹಾಗೂ ಪರಿಸರ ಸಂರಕ್ಷಣೆಯಲ್ಲಿ ಅದರ ಮಹತ್ವದ ಕುರಿತು ಮಾಹಿತಿ ನೀಡಿದರು.ಬಿವಿಟಿಯ ಕಾರ್ಯಕ್ರಮ ಅಧಿಕಾರಿ ಪ್ರತಿಮಾ ಕಾರ್ಯಕ್ರಮವನ್ನು ನಿರೂಪಿಸಿದರು. ಒಕ್ಕೂಟದ ಎಂಬಿಕೆ ರವಿಕಲಾ ಹಾಗೂ ಎಲ್‌ಸಿಆರ್‌ಪಿ ಅವರು ಸಹಕರಿಸಿದರು.

ಕಾರ್ಯಕ್ರಮದಲ್ಲಿ ಒಟ್ಟು 61 ಸ್ವಸಹಾಯ ಸಂಘಗಳ ಮಹಿಳೆಯರು ಭಾಗವಹಿಸಿದ್ದರು