ಇಲ್ಲಿನ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಐ.ಕ್ಯೂ.ಎ.ಸಿ., ಉದ್ಯೋಗ ಮಾರ್ಗದರ್ಶನ ಘಟಕ ಹಾಗೂ ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಯುವ ನಿಧಿ ಯೋಜನೆ ಅರಿವು ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ನೆರವೇರಿತು.

ಉಡುಪಿ: ಇಲ್ಲಿನ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಐ.ಕ್ಯೂ.ಎ.ಸಿ., ಉದ್ಯೋಗ ಮಾರ್ಗದರ್ಶನ ಘಟಕ ಹಾಗೂ ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಯುವ ನಿಧಿ ಯೋಜನೆ ಅರಿವು ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ನೆರವೇರಿತು.

ಮುಖ್ಯ ಅತಿಥಿಯಾಗಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಪದವಿ ಹಾಗೂ ಡಿಪ್ಲೊಮಾ ಮುಗಿಸಿ ಉದ್ಯೋಗಕ್ಕಾಗಿ ಎದುರು ನೋಡುತ್ತಿರುವ ಯುವಜನತೆಗೆ ಆರ್ಥಿಕ ಭದ್ರತೆ ಮತ್ತು ಕೌಶಲ್ಯ ತರಬೇತಿ ನೀಡುವ ನಿಟ್ಟಿನಲ್ಲಿ ಸರ್ಕಾರ ಜಾರಿಗೊಳಿಸಿರುವ ಯುವ ನಿಧಿ ಯೋಜನೆಯ ಮಹತ್ವವನ್ನು ವಿವರಿಸಿದರು.ಮಾಹಿತಿ: ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಲಹೆಗಾರರು ಮತ್ತು ತರಬೇತುದಾರರಾದ ಲಕ್ಷ್ಮೀ ಸುವರ್ಣ, ಯುವ ನಿಧಿ ಯೋಜನೆಯ ಅರ್ಹತಾ ಮಾನದಂಡಗಳು, ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳು ಹಾಗೂ ಯೋಜನೆಯಡಿ ದೊರೆಯುವ ಮಾಸಿಕ ನಿರುದ್ಯೋಗ ಭತ್ಯೆ (ಪದವೀಧರರಿಗೆ 3,000 ರು. ಹಾಗೂ ಡಿಪ್ಲೊಮಾಧರರಿಗೆ 1500 ರು.) ಮತ್ತು ಉಚಿತ ಕೌಶಲ್ಯ ತರಬೇತಿ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ್ ವಹಿಸಿದ್ದರು. ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳಾದ ವಿನೋದ್ ನಾಯ್ಕ್, ಪ್ರಥ್ವಿರಾಜ್, ಶೈಕ್ಷಣಿಕ ಸಲಹೆಗಾರ ಡಾ. ಶ್ರೀಧರ್ ಭಟ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಶ್ರೀ ದೇವಿ ಕೆ., ಪ್ಲೇಸ್‌ಮೆಂಟ್ ಸೆಲ್ ಅಧಿಕಾರಿಗಳಾದ ಬಿಂದು ಟಿ. ಹಾಗೂ ಮರ್ವಿನ್ ಡಿಸೋಜಾ ಉಪಸ್ಥಿತರಿದ್ದರು. ಸಹನಾ ಸ್ವಾಗತಿಸಿ, ಆಶ್ರಿತ್ ವಂದಿಸಿದರು, ಲಕ್ಷ್ಮೀ ನಿರೂಪಿಸಿದರು.