ಸಾರಾಂಶ
Awareness programme in Molakalmuru
ಮೊಳಕಾಲ್ಮುರು: ಡೆಂಘೀ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಜಾತಾಕ್ಕೆ ತಹಸೀಲ್ದಾರ್ ಜಗದೀಶ್ ಚಾಲನೆ ನೀಡಿದರು.
ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರೋಗ್ಯ ಅಧಿಕಾರಿಗಳ ಕಚೇರಿ ಸಹಯೋಗದಲ್ಲಿ ಜಾತ ಏರ್ಪಡಿಸಲಾಗಿತ್ತು. ಆರೋಗ್ಯ ಅಧಿಕಾರಿಗಳ ಕಚೇರಿ ಆವರಣದಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸಾಗಿ, ಬಸ್ ನಿಲ್ದಾಣಕ್ಕೆ ಆಗಮಿಸಿ, ಸಾರ್ವಜನಿಕರಿಗೆ ಡೆಂಘೀ ಜ್ವರದ ಕುರಿತು ಅರಿವು ಮೂಡಿಸಲಾಯಿತು. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಸಾಗಿ, ಸುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ಸೊಳ್ಳೆಗಳ ಉತ್ಪತ್ತಿ ತಡೆಗಟ್ಟಿ. ಸೊಳ್ಳೆಗಳ ಹರಡುವಿಕೆ ನಿಯಂತ್ರಿಸಬೇಕು ಎಂದು ಸಾರ್ವಜನಿಕರಲ್ಲಿ ಅರಿವನ್ನು ಮೂಡಿಸಿಲಾಯಿತು.ಈ ವೇಳೆ ತಾಲೂಕು ಆರೋಗ್ಯ ಅಧಿಕಾರಿ ಡಾ ಮಧುಕುಮಾರ್,ಹಿರಿಯ ಆರೋಗ್ಯ ನಿರೀಕ್ಷಕ ಕುಮಾರ್,ಮಂಜುನಾಥ,ಹಿರಿಯ ಮುಖಂಡ ಮರನಾಯಕ ಇದ್ದರು.----