ಬಿಪಿ ಮತ್ತು ಶುಗರ್‌ ಅನ್ನು ಆರಂಭಿಕ ಹಂತದಲ್ಲೇ ನಿಯಂತ್ರಣದಲ್ಲಿ ಇಟ್ಟರೆ ಔಷಧಿಗಳ ಅಗತ್ಯವಿಲ್ಲದೆ ವ್ಯಾಯಾಮ ಮತ್ತು ಸರಿಯಾದ ಆಹಾರ ಪದ್ಧತಿಯಿಂದ ನಿಯಂತ್ರಿಸಬಹುದು ಎಂದು ಅವರು ಸಲಹೆ ನೀಡಿದರು. ನಿರ್ಲಕ್ಷ್ಯ ಮಾಡಿದರೆ ಕಿಡ್ನಿ, ಕಣ್ಣು ಸೇರಿದಂತೆ ಹಲವು ಅಂಗಾಂಗಗಳಿಗೆ ಗಂಭೀರ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಜಂಕ್‌ಫುಡ್ ಕಡಿಮೆ ಮಾಡುವುದು, ನಿಯಮಿತ ವ್ಯಾಯಾಮ ಮತ್ತು ಆಹಾರ ನಿಯಂತ್ರಣದಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಬಹುದು ಎಂದು ಅವರು ಹೇಳಿದರು.

ಕನ್ನಡಪ್ರಭ ವಾರ್ತೆ ಬೇಲೂರುವಿಶ್ವ ಹೈಪರ್‌ಟೆನ್ಷನ್ ದಿನದ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಲಾಯಿತು.ಈ ಸಂದರ್ಭದಲ್ಲಿ ಕಾವೇರಿ ಕ್ಲಿನಿಕ್ ವೈದ್ಯಾಧಿಕಾರಿ ಹಾಗೂ ಲಯನ್ಸ್ ಮಾಜಿ ಅಧ್ಯಕ್ಷ ಡಾ. ಚಂದ್ರಮೌಳಿ ಮಾತನಾಡಿ, ವರ್ಲ್ಡ್ ಹಾರ್ಟ್ ಡೇ ಹಿನ್ನೆಲೆಯಲ್ಲಿ ಹೃದಯ ಸಂಬಂಧಿತ ರೋಗಗಳ ಕುರಿತು ಜಾಗೃತಿ ಮೂಡಿಸುವುದು ಅತ್ಯಗತ್ಯ. ಇಂದು ಬಹುತೇಕ ಜನರು ಆಸ್ಪತ್ರೆಗಳಿಗೆ ಬಂದಾಗ ಮಾತ್ರ ಬಿಪಿ ಹಾಗೂ ಶುಗರ್‌ ಪರೀಕ್ಷೆ ಮಾಡಿಸಿಕೊಳ್ಳುತ್ತಾರೆ. ಆದರೆ ದಿನನಿತ್ಯದ ಜೀವನದಲ್ಲೇ ತಮ್ಮ ಆರೋಗ್ಯದ ಬಗ್ಗೆ ಅರಿವು ಇರಬೇಕಾಗಿದೆ. 120/80 ಸಾಮಾನ್ಯ ಬಿಪಿ ಮಟ್ಟಕ್ಕಿಂತ ಸ್ವಲ್ಪ ಹೆಚ್ಚಾದರೂ ಅದನ್ನು ನಿರ್ಲಕ್ಷ್ಯ ಮಾಡಬಾರದು ಎಂದು ತಿಳಿಸಿದರು.ಬಿಪಿ ಮತ್ತು ಶುಗರ್‌ ಅನ್ನು ಆರಂಭಿಕ ಹಂತದಲ್ಲೇ ನಿಯಂತ್ರಣದಲ್ಲಿ ಇಟ್ಟರೆ ಔಷಧಿಗಳ ಅಗತ್ಯವಿಲ್ಲದೆ ವ್ಯಾಯಾಮ ಮತ್ತು ಸರಿಯಾದ ಆಹಾರ ಪದ್ಧತಿಯಿಂದ ನಿಯಂತ್ರಿಸಬಹುದು ಎಂದು ಅವರು ಸಲಹೆ ನೀಡಿದರು. ನಿರ್ಲಕ್ಷ್ಯ ಮಾಡಿದರೆ ಕಿಡ್ನಿ, ಕಣ್ಣು ಸೇರಿದಂತೆ ಹಲವು ಅಂಗಾಂಗಗಳಿಗೆ ಗಂಭೀರ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಜಂಕ್‌ಫುಡ್ ಕಡಿಮೆ ಮಾಡುವುದು, ನಿಯಮಿತ ವ್ಯಾಯಾಮ ಮತ್ತು ಆಹಾರ ನಿಯಂತ್ರಣದಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಬಹುದು ಎಂದು ಅವರು ಹೇಳಿದರು.ಈ ಕಾರ್ಯಕ್ರಮದ ಅಂಗವಾಗಿ ಗ್ಲೆನ್ಮಾರ್ಕ್‌ ಕಂಪನಿ ವತಿಯಿಂದ ಬಿಪಿ ಮತ್ತು ಶುಗರ್‌ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಗ್ಲೆನ್ಮಾರ್ಕ್‌ ಕಂಪನಿಯ ಪ್ರತಿನಿಧಿಗಳಾದ ಪವನ್ ಹಾಗೂ ಅರುಣ್, ಜೊತೆಗೆ ಡಾ. ರೋಹನ್ ಚಂದ್ರಮೌಳಿ ಹಾಗೂ ಆರೋಗ್ಯ ಕಾರ್ಯಕರ್ತರು ಭಾಗವಹಿಸಿದ್ದರು.