ಸಾರಾಂಶ
ವಿಶ್ವ ಜನಸಂಖ್ಯೆ 5 ಬಿಲಿಯನ್ ತಲುಪಿತಂತೆ. ಈ ದಿನವನ್ನು ಆಚರಿಸುವ ಮೂಲಕ ವಿಶ್ವದಲ್ಲಿ ಜನಸಂಖ್ಯೆಯ ಕುರಿತಾದ ವಿವಿಧ ಸಮಸ್ಯೆಗಳ ಕುರಿತಾಗಿ ವಿಶ್ವ ಸಮುದಾಯದ ಗಮನ ಸೆಳೆಯುವುದು ಈ ಆಚರಣೆಯ ಪ್ರಮುಖ ಉದ್ದೇಶ.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಿತು.ಮೈಸೂರಿನ ಶೇಷಾದ್ರಿಪುರಂ ಎಂಜಿನಿಯರಿಂಗ್ ಕಾಲೇಜಿನ ಎನ್‌ಎಸ್‌ಎಸ್ ಘಟಕ, ರೋಟರಿ ಕ್ಲಬ್ ಶ್ರೀರಂಗಪಟ್ಟಣ, ಅಚೀವರ್ಸ್ ಅಕಾಡೆಮಿ ಹಾಗೂ ಶಾರದಾ ವಿಲಾಸ್ ಕಾನೂನು ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ಆಯೋಜಿಸಿದ್ದ ಜಾಗೃತಿ ಜಾಥಾಗೆ ಕಾಲೇಜಿನ ಎನ್‌ಎಸ್‌ಎಸ್ ಅಧಿಕಾರಿ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಡಾ.ರಾಘವೇಂದ್ರ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.
ನಂತರ ಡಾ.ರಾಘವೇಂದ್ರ ಮಾತನಾಡಿ, ಜುಲೈ 11ರ ದಿನವನ್ನು ವಿಶ್ವ ಜನಸಂಖ್ಯಾ ದಿನ ಎಂದು ಕರೆಯಲಾಗುತ್ತಿದೆ. ಜಾಗತಿಕವಾಗಿ ಜನಸಂಖ್ಯೆ ಏರುತ್ತಿರುವ ವೇಗ ನೋಡಿ ವಿಶ್ವಸಂಸ್ಥೆ 1987ರಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಗೆ ಮುನ್ನುಡಿ ಬರೆಯಿತು ಎಂದರು.ವಿಶ್ವ ಜನಸಂಖ್ಯೆ 5 ಬಿಲಿಯನ್ ತಲುಪಿತಂತೆ. ಈ ದಿನವನ್ನು ಆಚರಿಸುವ ಮೂಲಕ ವಿಶ್ವದಲ್ಲಿ ಜನಸಂಖ್ಯೆಯ ಕುರಿತಾದ ವಿವಿಧ ಸಮಸ್ಯೆಗಳ ಕುರಿತಾಗಿ ವಿಶ್ವ ಸಮುದಾಯದ ಗಮನ ಸೆಳೆಯುವುದು ಈ ಆಚರಣೆಯ ಪ್ರಮುಖ ಉದ್ದೇಶ ಎಂದರು.
ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಜಾಥ ನಡೆಸಿ ಸಾರ್ವಜನಿಕರಲ್ಲಿ ಮೂಡಿಸಲಾಯಿತು. ಈ ವೇಳೆ ಶ್ರೀರಂಗಪಟ್ಟಣದ ರೋಟರಿ ಕಾರ್ಯದರ್ಶಿ ಎನ್. ನಾಗೇಂದ್ರ, ಸಹ ಕಾರ್ಯದರ್ಶಿ ರಾಜೇಶ್, ಉದ್ಯೋಗ ದಾತ ಸಂಸ್ಥೆ ಅಧ್ಯಕ್ಷ ರುಕ್ಮಾಂದ, ಶಾರದಾ ವಿಲಾಸ್ ಕಾನೂನು ಕಾಲೇಜಿನ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಸವಿತಾ, ಓಂ ಶ್ರೀ ನಿಕೇತನ ಶಾಲೆ ಮುಖ್ಯೋಪದ್ಯಾಯ ಶಿವಕುಮಾರ್, ನಾರಾಯಣ, ಪುನೀತ್, ರವಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು.