ಸಾರಾಂಶ
ಹಾವೇರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ಸಹಯೋಗದಲ್ಲಿ ವಿಶ್ವ ಮಲೇರಿಯಾ ದಿನ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್ ಚಾಲನೆ ನೀಡಿದರು.ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ ಸುರಗೀಹಳ್ಳಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಪಿ.ಆರ್. ಹಾವನೂರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ನಿಲೇಶ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ ಇತರರು ಭಾಗವಹಿಸಿದ್ದರು. ಜಾಗೃತಿ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಮೂಲಕ ಸೊಳ್ಳೆಗಳ ನಿಯಂತ್ರಣಕ್ಕಾಗಿ ಪರಿಸರ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲಾಯಿತು. ಜಿಲ್ಲಾರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಸರಿತಾ ಅವರು ವಿಶ್ವ ಮಲೇರಿಯಾ ದಿನದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಆರೋಗ್ಯ ಶಿಕ್ಷಣ ಅಧಿಕಾರಿ ಚನ್ನಪ್ಪ ಲಮಾಣಿ ಸ್ವಾಗತಿಸಿದರು.ನಿಟ್ಟೂರು ಕ್ರಾಸ್ ಬಳಿ ಟ್ರ‍್ಯಾಕ್ಟರ್‌ನಿಂದ ಬಿದ್ದು ಇಬ್ಬರು ಸಾವು
ರಾಣಿಬೆನ್ನೂರು: ಟ್ರ‍್ಯಾಕ್ಟರ್‌ನಿಂದ ಬಿದ್ದು ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ತಾಲೂಕಿನ ತುಮ್ಮಿನಕಟ್ಟಿ ಮುಖ್ಯ ರಸ್ತೆಯ ನಿಟ್ಟೂರು ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಗೋಡಿಹಾಳ ಗ್ರಾಮದ ಅಶೋಕ ಸಿದ್ದಪ್ಪ ಮಾಗನೂರ(56), ಜಗದೀಶ ಸಿದ್ದಪ್ಪ ಮಾಗನೂರ(50) ಎಂದು ಗುರುತಿಸಲಾಗಿದೆ. ಇವರು ಗೋಡಿಹಾಳ ಗ್ರಾಮದಿಂದ ಹರಿಹರಕ್ಕೆ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಟ್ರ‍್ಯಾಕ್ಟರ್‌ನಲ್ಲಿ ತೆರಳುತ್ತಿರುವಾಗ ಟ್ರೇಲರ್ ಹಿಂಭಾಗದ ಡೋರ್(ಪಾಲ್ಕಾ) ಮಗುಚಿ ಬಿದ್ದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಟಾಕಿ ಸಿಡಿದು ಗಾಯಗೊಂಡಿದ್ದ ವ್ಯಕ್ತಿ ಸಾವುಹಾವೇರಿ: ತಾಲೂಕಿನ ಬಸಾಪುರ ಆಲದಮ್ಮದೇವಿ ಜಾತ್ರೆ ವೇಳೆ ಪಟಾಕಿ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಗುರುವಾರ ಮೃತಪಟ್ಟಿದ್ದಾರೆ.ಬ್ಯಾಡಗಿ ತಾಲೂಕಿನ ಖುರ್ದುಕೋಡಿಹಳ್ಳಿ ಗ್ರಾಮದ ಕರಿಯಪ್ಪ ಶಿವನೆಪ್ಪ ಕಾಶಂಬಿ (33) ಮೃತಪಟ್ಟ ವ್ಯಕ್ತಿ.ಇವರು ಏ. 18ರಂದು ಬಸಾಪುರದ ಆಲದಮ್ಮ ದೇವಿ ಜಾತ್ರೆಯ ಮೆರವಣಿಗೆ ನೋಡುತ್ತಿದ್ದಾಗ ಗ್ರಾಮದ ಹನುಮಂತ ದೇವರ ಗುಡಿ ಬಳಿ ಪಟಾಕಿ ಸಿಡಿಸಲಾಗುತ್ತಿತ್ತು. ಆಗ ಪಟಾಕಿ ಕರಿಯಪ್ಪನ ಎದೆಗೆ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆಂದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕರಿಯಪ್ಪ ಗುರುವಾರ ಮೃತಪಟ್ಟಿದ್ದಾನೆ ಎಂದು ಮೃತನ ಚಿಕ್ಕಪ್ಪ ರೇವಣಸಿದ್ದಪ್ಪ ಕಾಶಂಬಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.